Home
ಸುದ್ದಿಜಾಲ

ಮತ್ತೊಂದು 5G ಫೋನ್‌ ಲಾಂಚ್‌ ಮಾಡಲು ಸಜ್ಜಾದ ವಿವೋ; ಅಚ್ಚರಿಯ ಫೀಚರ್ಸ್‌!

ದೇಶಿಯ ಮಾರುಕಟ್ಟೆಯಲ್ಲಿ ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಡಿಮ್ಯಾಂಡ್‌ ಹೆಚ್ಚಿದೆ. ಸಂಸ್ಥೆಯು ಇತ್ತೀಚಿಗೆ ವಿವೋ T1 5G ಫೋನ್‌ ಸರಣಿ ಬಿಡುಗಡೆ ಮಾಡಿ ಭಾರೀ ಗಮನ ಸೆಳೆದಿದೆ. ಅದರ ಮುಂದುವರಿದ ಭಾಗವಾಗಿ ಇದೀಗ ವಿವೋ ಸಂಸ್ಥೆಯು ವಿವೋ T2 5G ಮತ್ತು ವಿವೋ T2x 5G ಸ್ಮಾರ್ಟ್‌ಫೋನ್‌ ಲಾಂಚ್ ಮಾಡಲು ಸಜ್ಜಾಗಿದ್ದು, ದಿನಾಂಕ ಸಹ ನಿಗದಿಯಾಗಿದೆ.

ಹೌದು, ವಿವೋ ಕಂಪೆನಿ ವಿವೋ T2 5G ಮತ್ತು ವಿವೋ T2x 5G ಫೋನ್‌ಗಳನ್ನು ಇದೇ ಏಪ್ರಿಲ್‌ 11 ರಂದು ಅಧಿಕೃತವಾಗಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ವಿವೋ T2 5G ಮತ್ತು ವಿವೋ T2x 5G ಈ ಎರಡು ಫೋನ್‌ಗಳು ಹಿಂದಿನ ಸರಣಿ ಫೋನ್‌ಗಳಿಗಿಂತ ಅಪ್‌ಡೇಟ್‌ ಆಗಿರಲಿದ್ದು, ಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿರಲಿವೆ.

ಮತ್ತೊಂದು 5G ಫೋನ್‌ ಲಾಂಚ್‌ ಮಾಡಲು ಸಜ್ಜಾದ ವಿವೋ; ಅಚ್ಚರಿಯ ಫೀಚರ್ಸ್‌!

ವಿವೋ T2 5G ಫೋನ್‌ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್‌ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿರಲಿದೆ ಎಂದು ಹೇಳಲಾಗಿದೆ. ಹಾಗಾದರೇ ವಿವೋ T2 5G ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎನ್ನುವ ಬಗ್ಗೆ ಮುಂದೆ ತಿಳಿಯೋಣ.

ಡಿಸ್‌ಪ್ಲೇ ಮತ್ತು ಪ್ರೊಸೆಸರ್‌ ಮಾಹಿತಿ : ವಿವೋ T2 5G ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡ 6.62 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ.

ಮತ್ತೊಂದು 5G ಫೋನ್‌ ಲಾಂಚ್‌ ಮಾಡಲು ಸಜ್ಜಾದ ವಿವೋ; ಅಚ್ಚರಿಯ ಫೀಚರ್ಸ್‌!

ಕ್ಯಾಮೆರಾ ಮತ್ತು ಬ್ಯಾಟರಿ ಮಾಹಿತಿ : ವಿವೋ T2 5G ಸ್ಮಾರ್ಟ್‌ಫೋನ್‌ ತ್ರಿವಳಿ ಕ್ಯಾಮೆರಾ ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಆಗಿರಲಿದೆ. ಇನ್ನುಳಿದ ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್‌ ಮತ್ತು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿರಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಆಗಿರಲಿದೆ. ಇನ್ನು ಈ ಫೋನ್‌ 4700 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದೆ.

ವಿವೋ T2x 5G ಫೋನ್‌ ಫೀಚರ್ಸ್‌ : ವಿವೋ T2x 5G ಫೋನ್‌ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿಲಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿರಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್ ಪಡೆದಿರುವ ನಿರೀಕ್ಷೆಯಿದೆ. ಜೊತೆಗೆ 4GB/ 6GB/ 8GB RAM ಮತ್ತು 128GB ಸ್ಟೋರೇಜ್‌ ಹೊಂದಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ವಿವೋ T1 ಸ್ಮಾರ್ಟ್‌ಫೋನ್‌ ಫೀಚರ್ಸ್‌ : ವಿವೋ T1 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡ 6.67-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಪೆಡದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಹಾಗೆಯೇ 12 GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಫೋನ್‌ 5,000 mAh ಬ್ಯಾಟರಿಯನ್ನು ಹೊಂದಿದ್ದು, 44W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

Best Mobiles in India

English summary
Vivo T2 and Vivo T2x India launch date has been officially revealed. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+