ವಿವೋ T2x 5G ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು OMG ಅಂತೀರಾ!
ದಿಗ್ಗಜ ಆನ್‌ಲೈನ್ ತಾಣ ಎನಿಸಿರುವ ಫ್ಲಿಪ್‌ಕಾರ್ಟ್ ಫೋನ್‌ಗಳಿಗೆ ಸ್ಪೆಷಲ್ ರಿಯಾಯಿತಿ ಲಭ್ಯ ಮಾಡುವ ಮೂಲಕ ಗಮನ ಸೆಳೆದಿದೆ. ಈ ಆನ್‌ಲೈನ್ ವೆಬ್‌ಸೈಟ್ ಎಲ್ಲ ಮಾದರಿಯ ಮೊಬೈಲ್‌ಗಳಿಗೆ ಒಂದಿಲ್ಲೊಂದು ಆಕರ್ಷಕ ಡಿಸ್ಕೌಂಟ್ ನೀಡುತ್ತಾ ಸಾಗಿದೆ. ಹೀಗಾಗಿ ನೂತನ ಮೊಬೈಲ್ ಖರೀದಿಸುವಾಗ ಬಹುತೇಕರು ಈ ಆನ್‌ಲೈನ್ ವೆಬ್‌ಸೈಟ್ ನತ್ತ ಮುಖ ಮಾಡುತ್ತಾರೆ. ಸದ್ಯ ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯ ವಿವೋ T2x 5G ಫೋನ್ ಭರ್ಜರಿ ರಿಯಾಯಿತಿ ಪಡೆದಿದ್ದು, ಗ್ರಾಹಕರು ವಾವ್ ಎನ್ನುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ವಿವೋ T2x 5G (vivo T2x 5G) ಫೋನ್ ಶೇ. 33% ರಷ್ಟು ನೇರ ರಿಯಾಯಿತಿ ಪಡೆದಿದ್ದು, ಈ ಫೋನ್ 4 GB RAM + 128 GB ವೇರಿಯಂಟ್ ಮೊಬೈಲ್ 11,999 ರೂ. ಗಳ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಗ್ರಾಹಕರಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆ ಮತ್ತು ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಲಭ್ಯ ಆಗಲಿವೆ. ಹಾಗಾದರೇ ವಿವೋ T2x 5G ಫೋನಿನ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ವಿವೋ T2x 5G ಮೊಬೈಲ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ಪವರ್ ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಕೂಡಾ ಪಡೆದಿದೆ.
ಪ್ರೊಸೆಸರ್ ಕಾರ್ಯ
ವಿವೋ T2x 5G ಮೊಬೈಲ್ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್ ವೇರಿಯಂಟ್ ಅನ್ನು ಒಳಗೊಂಡಿದೆ. ಇದಲ್ಲದೆ ( SD ಕಾರ್ಡ್ ) ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒದಗಿಸಲಾಗಿದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್ RAM 3.0 ಫೀಚರ್ಸ್ ಅನ್ನು ಕೂಡ ಪಡೆದಿದೆ.
ಕ್ಯಾಮೆರಾ ಸೆನ್ಸಾರ್
ವಿವೋ T2x 5G ( vivo T2x 5G ) ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಬ್ಯಾಟರಿ ಬ್ಯಾಕ್‌ಅಪ್
ವಿವೋ T2x 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಆಯ್ಕೆಗಳನ್ನು ಕೂಡಾ ಒಳಗೊಂಡಿದೆ.
ಮೆಮೊರಿ ಹಾಗೂ ಕಲರ್
ಭಾರತೀಯ ಮಾರುಕಟ್ಟೆಯಲ್ಲಿ ವಿವೋ T2x 5G ಮೊಬೈಲ್ 4 GB + 128 GB ವೇರಿಯಂಟ್ ಹಾಗೂ 6 GB + 128 GB ಮತ್ತು 8 GB + 128 GB ವೇರಿಯಂಟ್ ಆಯ್ಕೆ ಒಳಗೊಂಡಿದೆ. ಇದರೊಂದಿಗೆ ಈ ಫೋನ್ ಬ್ಲ್ಯಾಕ್, ಬ್ಲೂ ಹಾಗೂ ಗೋಲ್ಡ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








