ವಿವೋದ ಈ ಫೋನ್ ಮೇಲೆ ಬರೋಬ್ಬರಿ 31% ಡಿಸ್ಕೌಂಟ್:..1TBವರೆಗೆ ಸ್ಟೋರೇಜ್ ವಿಸ್ತರಿಸುವ ಆಯ್ಕೆ!
ಭಾರತದ ಮಾರುಕಟ್ಟೆಯಲ್ಲಿ ಭಾರಿ ಸದ್ದು ಮಾಡಿದ್ದ ವಿವೋ T2x 5G ಸ್ಮಾರ್ಟ್‌ಫೋನ್ ಇದೀಗ ಡಿಸ್ಕೌಂಟ್ ಪಡೆದುಕೊಂಡಿದೆ. ಫ್ಲಿಪ್‌ಕಾರ್ಟ್ ತಾಣದಲ್ಲಿ ವಿವೋ T2x 5G ಸ್ಮಾರ್ಟ್‌ಫೋನ್ ಮೇಲೆ ಬರೋಬ್ಬರಿ 31% ಡಿಸ್ಕೌಂಟ್ ಪಡೆದಿದೆ. ಇದರಿಂದ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಗುಡ್‌ನ್ಯೂಸ್ ಸಿಕ್ಕಿದೆ.
ಹೌದು, ವಿವೋ T2x 5G ಸ್ಮಾರ್ಟ್‌ಫೋನ್ ಮೇಲೆ ಫ್ಲಿಪ್‌ಕಾರ್ಟ್‌ನಲ್ಲಿ ಭರ್ಜರಿ ರಿಯಾಯಿತಿ ನೀಡಲಾಗ್ತಿದೆ. ಇದರಿಂದ ಸ್ಮಾರ್ಟ್‌ಫೋನ್ ಮೇಲಿನ ಬೆಲೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಡಿಸ್ಕೌಂಟ್ ನಂತರದ ಬೆಲೆ ಎಷ್ಟಿದೆ? ಇದರ ಫೀಚರ್ಸ್ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ T2x 5G ಫೋನ್ ಮೇಲಿನ ಡಿಸ್ಕೌಂಟ್ ಏನು?
ವಿವೋ T2x 5G ಸ್ಮಾರ್ಟ್‌ಫೋನಿನ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯು ಫ್ಲಿಪ್‌ಕಾರ್ಟ್ ತಾಣದಲ್ಲಿ 18,999ರೂ ಬೆಲೆಯಲ್ಲಿ ಪಟ್ಟಿಮಾಡಲಾಗಿದೆ. ಆದರೆ ಸ್ಮಾರ್ಟ್‌ಫೋನ್ ಮೇಲೆ ಬರೋಬ್ಬರಿ 31% ರಿಯಾಯಿತಿ ನೀಡಲಾಗ್ತಿರುವುದರಿಂದ ಇದನ್ನು ನೀವು ಕೇವಲ 12,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದರೊಂದಿಗೆ ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸುವವರಿಗೆ ಹೆಚ್ಚುವರಿ ರಿಯಾಯಿತಿ ಕೂಡ ದೊರೆಯಲಿದೆ.
ವಿವೋ T2x 5G ಫೀಚರ್ಸ್ ಹೇಗಿದೆ?
ವಿವೋ T2x 5G ಸ್ಮಾರ್ಟ್‌ಫೋನ್ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ 84.1% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತದಲ್ಲಿದೆ. ಇದು 401 ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ.

ವಿವೋ T2x 5G ಪ್ರೊಸೆಸರ್ ಮಾಹಿತಿ
ವಿವೋ T2x 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ RAM 3.0 ಫೀಚರ್ಸ್ ಅನ್ನು ಸಹ ಪಡೆದಿದೆ.
ವಿವೋ T2x 5G ಕ್ಯಾಮೆರಾ ಸೆಟಪ್ ಹೇಗಿದೆ?
ವಿವೋ T2x 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ವಿವೋ T2x 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ವಿವೋ T2x 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯಲ್ಲಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಬೆಂಬಲಿಸಲಿದೆ. ಇದರೊಂದಿಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸೆಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಕಂಪಾಸ್ ಅನ್ನು ಸಹ ನೀಡಲಾಗಿದೆ.
ವಿವೋ T2x 5G ಕಲರ್ ಆಯ್ಕೆ ಮತ್ತು ಲಭ್ಯತೆ
ವಿವೋ T2x 5G ಸ್ಮಾರ್ಟ್‌ಫೋನಿನ ಮರೀನ್ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯು 31% ರಿಯಾಯಿತಿ ಪಡೆದಿರುವುದರಿಂದ ಇದನ್ನು ನೀವು ಕೇವಲ 12,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








