Vivo: ವಿವೋ ಸಂಸ್ಥೆಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ರಿಯಾಯಿತಿ! ಸೆಲ್ಫಿ ಪ್ರಿಯರ ನೆಚ್ಚಿನ ಫೋನ್
ವಿವೋ ಫೋನ್ ಖರೀದಿಸುವ ಗ್ರಾಹಕರಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಆಫರ್ ದೊರೆಯುತ್ತಿದೆ. ಕಳೆದ ವರ್ಷ ಮಾರುಕಟ್ಟೆಗೆ ಎಂಟ್ರಿ ನೀಡಿ ಎಲ್ಲರ ಮನಗೆದ್ದಿದ್ದ ವಿವೋ T2x 5G ಸ್ಮಾರ್ಟ್‌ಫೋನ್ ಮೇಲೆ ಬಿಗ್ ಡಿಸ್ಕೌಂಟ್ ದೊರೆಯುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ವಿವೋ T2x 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 31% ಡಿಸ್ಕೌಂಟ್ ಪಡೆದುಕೊಂಡಿದೆ. ಈ ಡಿಸ್ಕೌಂಟ್ ಫೋನ್‌ನ 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ ಅನ್ವಯವಾಗಲಿದೆ. ವಿವೋ T2x 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಹಾಗಾದ್ರೆ ವಿವೋ T2x 5G ಸ್ಮಾರ್ಟ್‌ಫೋನ್ ಡಿಸ್ಕೌಂಟ್ ನಂತರದ ಬೆಲೆ ಎಷ್ಟಿದೆ? ಇದರ ಫೀಚರ್ಸ್ ವಿವರಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ T2x 5G ಡಿಸ್ಕೌಂಟ್ ಬೆಲೆ ಎಷ್ಟು?
Vivo T2x 5G ಸ್ಮಾರ್ಟ್‌ಫೋನ್‌ನ 6GB RAM ಮತ್ತು 128 GB ಸ್ಟೋರೇಜ್ ಆಯ್ಕೆಯು ಫ್ಲಿಪ್‌ಕಾರ್ಟ್ ತಾಣದಲ್ಲಿ 18,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಇದರ ಮೇಲೆ 31% ಡಿಸ್ಕೌಂಟ್ ಪಡೆದುಕೊಂಡಿರುವುದರಿಂದ 12,999ರೂ ಬೆಲೆಗೆ ಲಭ್ಯವಾಗುತ್ತಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಅನ್ನು ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಕ್ಯಾಶ್‌ಬ್ಯಾಕ್ ಅನ್ನು ಸಹ ನೀಡಲಾಗುತ್ತಿದೆ.
ವಿವೋ T2x 5G ಫೀಚರ್ಸ್ ಹೇಗಿದೆ?
ವಿವೋ T2x 5G ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಈ ಡಿಸ್‌ಪ್ಲೇ 84.5% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿದ್ದು, 20:9 ರಚನೆಯ ಅನುಪಾತವನ್ನು ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಹೊಂದಿದ್ದು, 650 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಒಳಗೊಂಡಿದೆ.

ವಿವೋ T2x 5G ಪ್ರೊಸೆಸರ್ ಯಾವುದು?
ವಿವೋ T2x 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒದಗಿಸಲಾಗಿದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್ RAM 3.0 ಫೀಚರ್ಸ್ ಅನ್ನು ಕೂಡ ಪಡೆದಿದೆ.
ವಿವೋ T2x 5G ಕ್ಯಾಮೆರಾ ರಚನೆ
ವಿವೋ T2x 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ವಿವೋ T2x 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ವಿವೋ T2x 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಸೈಡ್‌ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಪಡೆದುಕೊಂಡಿದೆ.


Click it and Unblock the Notifications








