ಇಂದಿನಿಂದ ವಿವೋ T2x 5G ಖರೀದಿಗೆ ಲಭ್ಯ!..ಭರ್ಜರಿ ಆಫರ್ ಧಮಾಕಾ!
ವಿವೋ ಮೊಬೈಲ್ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ವಿವೋ T2x 5G ಸ್ಮಾರ್ಟ್‌ಫೋನ್ ಇಂದು ಮಾರಾಟ ಪ್ರಾರಂಭಿಸಲಿದೆ. ಮಧ್ಯಾಹ್ನ 12 ಗಂಟೆಯಿಂದ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮತ್ತು ಅಧಿಕೃತ ವಿವೋ ವೆಬ್‌ಸೈಟ್ ಮೂಲಕ ಸೇಲ್ ಪ್ರಾರಂಭಿಸಲಿದೆ. ಅಂದಹಾಗೆ ಈ ಫೋನ್ ಬಜೆಟ್ ಪ್ರೈಸ್ ಟ್ಯಾಗ್ ಹೊಂದಿದ್ದು, 5G ನೆಟ್‌ವರ್ಕ್ ಸಪೋರ್ಟ್ ಅನ್ನು ಒಳಗೊಂಡಿದೆ.
ವಿವೋ T2x 5G ಫೋನ್ ಇಂದು (ಏ. 21) ಅಮೆಜಾನ್‌ನಲ್ಲಿ ಮಾರಾಟ ಶುರು ಮಾಡಲಿದೆ. ಈ ಫೋನ್ 8 GB RAM ಮತ್ತು 128 GB ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವುದಕ್ಕೆ ಅವಕಾಶ ಮಾಡಿದೆ. ಇನ್ನು ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.

ವಿವೋ T2x 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನಿನ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನ್ ಬೆಲೆ ಎಷ್ಟು? ಈ ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿವೋ T2x 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್ : ವಿವೋ T2x 5G ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ.
ವಿವೋ T2x 5G ಮೆಮೊರಿ : ವಿವೋ T2x 5G ಫೋನ್ 8 GB RAM ಮತ್ತು 128 GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಿದೆ. ಈ ಸ್ಮಾರ್ಟ್‌ಫೋನ್ RAM 3.0 ಫೀಚರ್ಸ್ ಅನ್ನು ಕೂಡ ಪಡೆದಿದೆ.
ವಿವೋ T2x 5G ಕ್ಯಾಮೆರಾ ರಚನೆ : ವಿವೋ T2x 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ವಿವೋ T2x 5G ಬ್ಯಾಟರಿ ಬ್ಯಾಕ್‌ಅಪ್ : ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ : ಭಾರತದಲ್ಲಿ ವಿವೋ T2x 5G ಫೋನ್ ಬೆಲೆ 4GB + 128GB ವೇರಿಯಂಟ್‌ಗೆ 12,999 ರೂ. ಹಾಗೂ 6GB + 128GB ಮತ್ತು 8GB + 128GB ವೇರಿಯಂಟ್‌ಗಳು ಕ್ರಮವಾಗಿ 13,999ರೂ ಮತ್ತು 15,999ರೂ. ಬೆಲೆ ಹೊಂದಿವೆ. ಐಸಿಐಸಿಐ ಹಾಗೂ ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ, 1,000ರೂ. ರಿಯಾಯಿತಿ ಸಹ ದೊರೆಯುತ್ತದೆ.


Click it and Unblock the Notifications








