ನಾಳೆ ಬಹುನಿರೀಕ್ಷಿತ ವಿವೋ T3 5G ಫೋನ್ ಫಸ್ಟ್ ಸೇಲ್!..ಖಂಡಿತಾ ಆಫರ್ ಇದೆ!
ಜನಪ್ರಿಯ ವಿವೋ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ವಿವೋ T3 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದ್ದು, ಇದು ಫೀಚರ್ಸ್ ಹಾಗೂ ಡಿಸೈನ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ನಾಳೆ (ಮಾರ್ಚ್ 27 ರಂದು) ಫಸ್ಟ್ ಸೇಲ್ ಪ್ರಾರಂಭ ಮಾಡಲಿದೆ.
ಹೌದು, ವಿವೋ ಸಂಸ್ಥೆಯ ವಿವೋ T3 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ನಾಳೆ ಮಧ್ಯಾಹ್ನ 12 ರಂದು ಸೇಲ್ ಪ್ರಾರಂಭ ಆಗಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದರೊಂದಿಗೆ 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ ರಚನೆ ಸಹ ಒಳಗೊಂಡಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 19,999ರೂ. ಗಳು ಆಗಿದ್ದು, ಆಯ್ದ ಆಫರ್‌ಗಳು ಸಹ ಲಭ್ಯ.

ಅಂದಹಾಗೆ ಈ ಹೊಸ 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದು 16 ಕಾಸ್ಮಿಕ್ ಬ್ಲೂ ಮತ್ತು ಸಿಸ್ಟಲ್ ಫ್ಲೇಕ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ವಿವೋ T3 5G ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ವಿವೋ T3 5G ಸ್ಮಾರ್ಟ್‌ಫೋನ್ ಫೀಚರ್ಸ್
ವಿವೋ T3 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 2400×1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್, ಹೆಚ್‌ಡಿಆರ್ 10+ ಸೌಲಭ್ಯ, 1800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಕೂಡಾ ಪಡೆದಿದ್ದು, ಬಳಕೆಯಲ್ಲಿ ಪ್ರೀಮಿಯಂ ಅನುಭವ ಒದಗಿಸಲಿದೆ.
ವಿವೋ T3 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು. ಆಂಡ್ರಾಯ್ಡ್ 14 ಓಎಸ್ ಬಲ ಪಡೆದಿದೆ. ಹಾಗೆಯೇ 8GB RAM, 128GB ಹಾಗೂ 256GB ಆಂತರೀಕ ಸ್ಟೋರೇಜ್ ಆಯ್ಕೆ ಇವೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸುವ ಆಯ್ಕೆ ಕೂಡಾ ಲಭ್ಯ.
ವಿವೋ T3 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಇನ್ನೊಂದು ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ನಲ್ಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.
ವಿವೋ T3 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸರ್ ನಂತಹ ಆಯ್ಕೆಗಳು ಇವೆ.
ಭಾರತದಲ್ಲಿ ವಿವೋ T3 5G ಫೋನ್ 8GB + 128GB ವೇರಿಯಂಟ್ 19,999 ರೂ. ಬೆಲೆಯನ್ನು ಪಡೆದಿದ್ದು, ಹಾಗೆಯೇ 8GB + 256GB ವೇರಿಯಂಟ್ 21,999 ರೂ.ಗಳ ಪ್ರೈಸ್ ಟ್ಯಾಗ್ ಹೊಂದಿದೆ. ಈ ಫೋನ್ (ನಾಳೆ) ಮಾರ್ಚ್ 27 ರಿಂದ ವಿವೋ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಮಾರಾಟ ಶುರು ಮಾಡಲಿದೆ. ಇದು ಕಾಸ್ಮಿಕ್ ಬ್ಲೂ ಮತ್ತು ಸಿಸ್ಟಲ್ ಫ್ಲೇಕ್ ಕಲರ್ ಆಯ್ಕೆಗಳಲ್ಲಿ ಲಭ್ಯ. ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಕೊಡುಗೆ ಲಭ್ಯ.


Click it and Unblock the Notifications








