Home
ಸುದ್ದಿಜಾಲ

ವಿವೋ T3 5G ಸ್ಮಾರ್ಟ್‌ಫೋನ್‌ ಬೆಲೆ ಇಳಿಕೆ; ಈ ಫೋನ್‌ ಖರೀದಿ ಮಾಡ್ತೀರಾ?

ಮೊಬೈಲ್‌ ಮಾರುಕಟ್ಟೆಯಲ್ಲಿ ವಿವೋ ಕಂಪನಿಯ ಸ್ಮಾರ್ಟ್‌ಫೋನ್‌ಗಳಿಗೆ ಡಿಮ್ಯಾಂಡ್‌ ಇದ್ದು, ಬಜೆಟ್‌ ದರದ ಮಾಡೆಲ್‌ಗಳು ಹೆಚ್ಚು ಗಮನ ಸೆಳೆದಿವೆ. ಆ ಪೈಕಿ ಕಂಪನಿಯ ವಿವೋ T3 5G ಮೊಬೈಲ್‌ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದ್ದು, ಈ ಮೊಬೈಲ್‌ ಬಜೆಟ್‌ ರೇಂಜ್‌ನಲ್ಲಿ ಕಾಣಿಸಿಕೊಂಡಿದೆ. ಸದ್ಯ ವಿವೋ T3 5G (vivo T3 5G) ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ನಲ್ಲಿ ಆಕರ್ಷಕ ಇಳಿಕೆ ಕಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಇದೀಗ ವಿವೋ T3 5G (vivo T3 5G) ಮೊಬೈಲ್‌ ಶೇ. 19% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಫೋನಿನ 8 GB RAM + 128 GB ವೇರಿಯಂಟ್‌ 18,499ರೂ. ಗಳ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಂಡರೆ, ಈ ಮೊಬೈಲ್‌ ಅನ್ನು ಇನ್ನಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಸಬಹುದು.

ವಿವೋ T3 5G ಸ್ಮಾರ್ಟ್‌ಫೋನ್‌ ಬೆಲೆ ಇಳಿಕೆ; ಈ ಫೋನ್‌ ಖರೀದಿ ಮಾಡ್ತೀರಾ?

ವಿವೋ T3 5G ಮೊಬೈಲ್‌ 6GB + 128GB ಸ್ಟೋರೇಜ್‌ ವೇರಿಯಂಟ್‌ ಮತ್ತು 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಮೊಬೈಲ್‌ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ವಿವೋ T3 5G ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿವೋ T3 5G - ಫೀಚರ್ಸ್‌ ಮಾಹಿತಿ

ವಿವೋ T3 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್, ಹೆಚ್‌ಡಿಆರ್ 10+ ಸೌಲಭ್ಯ, 1800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಸೌಲಭ್ಯ ಸಹ ಹೊಂದಿದೆ.

ವಿವೋ T3 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಪಡೆದಿದೆ. ಇದರ ಜೊತೆಗೆ 128GB ಹಾಗೂ 256GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಇವೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್‌ ವಿಸ್ತರಿಸುವ ಸೌಲಭ್ಯ ಪಡೆದಿದೆ.

ವಿವೋ T3 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಈ ಮೊಬೈಲ್‌ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ.

ವಿವೋ T3 5G ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಕೂಡಾ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಮೊಬೈಲ್‌ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸರ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗೆಯೇ ಇದು ಕಾಸ್ಮಿಕ್ ಬ್ಲೂ ಮತ್ತು ಸಿಸ್ಟಲ್ ಫ್ಲೇಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Vivo T3 5G Gets a Huge Price Cut on Flipkart. Check Offer Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+