ವಿವೋ T3 5G ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ; ಈ ಚಾನ್ಸ್ ಮಿಸ್ ಮಾಡ್ಕೋಬೇಡಿ!
ಜನಪ್ರಿಯ ಮೊಬೈಲ್ ಆಗಿ ಗುರುತಿಸಿಕೊಂಡಿರುವ ವಿವೋ ಕಂಪನಿಯ ಐಫೋನ್ ಮಾಡೆಲ್‌ಗಳು ಮಾರುಕಟ್ಟೆಯಲ್ಲಿ ಗಮನ ಸೆಳೆದಿವೆ. ಅದರಲ್ಲಿಯೂ ಸಂಸ್ಥೆಯ T ಸರಣಿಯ ಮೊಬೈಲ್‌ಗಳು ಆಕರ್ಷಕ ಫೀಚರ್ಸ್ ಹಾಗೂ ಬೆಲೆಯಿಂದ ಹೆಚ್ಚಿನ ಗಮನ ಸೆಳೆದಿವೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ವಿವೋ T3 5G (vivo T3 5G) ಮೊಬೈಲ್ ಗಣನೀಯ ಬೆಲೆ ಇಳಿಕೆ ಕಂಡಿದ್ದು, ಹೊಸ ವಿವೋ ಖರೀದಿಸಬೇಕು ಎಂದಿರುವ ಗ್ರಾಹಕರ ಸಂತಸ ಎನಿಸಿದೆ.
ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ನಲ್ಲಿ ವಿವೋ ಸಂಸ್ಥೆಯ ವಿವೋ T3 5G (vivo T3 5G) ಮೊಬೈಲ್ ಶೇ. 17% ರಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನಿನ 8 GB RAM + 128 GB ಸ್ಟೋರೇಜ್‌ನ ವೇರಿಯಂಟ್ ಅನ್ನು ಗ್ರಾಹಕರು 57,499ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.

ಹಾಗೆಯೇ ವಿವೋ T3 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, 50 ಮೆಗಾ ಪಿಕ್ಸಲ್ ಮುಖ್ಯ ಕ್ಯಾಮೆರಾ ರಚನೆ ಸಹ ಒಳಗೊಂಡಿದೆ. ಇನ್ನು ಗ್ರಾಹಕರು ಇದನ್ನು ಕಾಸ್ಮಿಕ್ ಬ್ಲೂ ಮತ್ತು ಸಿಸ್ಟಲ್ ಫ್ಲೇಕ್ ಕಲರ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ. ಹಾಗಾದರೇ ವಿವೋ T3 5G (vivo T3 5G) ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ವಿವೋ T3 5G - ಫೀಚರ್ಸ್
ವಿವೋ T3 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್, ಹೆಚ್‌ಡಿಆರ್ 10+ ಸೌಲಭ್ಯ, 1800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಕೂಡಾ ಪಡೆದಿದೆ.
ವಿವೋ T3 5G ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಇದರೊಂದಿಗೆ 8GB RAM, 128GB ಹಾಗೂ 256GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಇವೆ. ಹಾಗೆಯೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸುವ ಸೌಲಭ್ಯ ಪಡೆದಿದೆ.
ವಿವೋ T3 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ.
ವಿವೋ T3 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಕುಡಾ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸರ್ ಆಯ್ಕೆಗಳನ್ನು ಪಡೆದುಕೊಂಡಿದೆ.


Click it and Unblock the Notifications








