Home
ಸುದ್ದಿಜಾಲ

ವಿವೋ T3 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ; ಗ್ರಾಹಕರು ಫುಲ್‌ ಖುಷ್‌!

ಜನಪ್ರಿಯ ಆನ್‌ಲೈನ್‌ ಶಾಪಿಂಗ್‌ ಪ್ಲಾಟ್‌ಫಾರ್ಮ್ ಎನಿಸಿರುವ ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಸ್ಮಾರ್ಟ್‌ಫೋನ್‌ಗಳಿಗೆ ಬೊಂಬಾಟ್‌ ಸ್ಪೆಷಲ್‌ ಆಫರ್‌ ನೀಡುತ್ತಾ ಮುನ್ನಡೆದಿದೆ. ಆ ಪೈಕಿ ಇದೀಗ ವಿವೋ T3 5G (vivo T3 5G) ಮೊಬೈಲ್‌ ಸಖತ್ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಹುಬ್ಬೇರಿಸಿ ಅಚ್ಚರಿಯಿಂದ ನೋಡುವಂತೆ ಆಗಿದೆ.

ಹೌದು, ಫ್ಲಿಪ್‌ಕಾರ್ಟ್‌ ನಲ್ಲಿ ವಿವೋ ಕಂಪನಿಯ ವಿವೋ T3 5G (vivo T3 5G) ಮೊಬೈಲ್‌ ಶೇ. 19% ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನಿನ 8 GB RAM + 128 GB ಸ್ಟೋರೇಜ್‌ನ ವೇರಿಯಂಟ್‌ ಅನ್ನು ಖರೀದಿದಾರರು 18,499ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ.

ವಿವೋ T3 5G ಫೋನ್‌ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ; ಗ್ರಾಹಕರು ಫುಲ್‌ ಖುಷ್‌

ಅಂದಹಾಗೆ ವಿವೋ T3 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, 50 ಮೆಗಾ ಪಿಕ್ಸಲ್‌ ಮುಖ್ಯ ಕ್ಯಾಮೆರಾ ಸೆಟ್‌ಅಪ್‌ ಸಹ ಒಳಗೊಂಡಿದೆ. ಇನ್ನು ಗ್ರಾಹಕರು ಇದನ್ನು ಕಾಸ್ಮಿಕ್ ಬ್ಲೂ ಮತ್ತು ಸಿಸ್ಟಲ್ ಫ್ಲೇಕ್ ಕಲರ್‌ ಆಯ್ಕೆಗಳಲ್ಲಿ ಖರೀದಿ ಮಾಡಬಹುದು. ಇನ್ನುಳಿದಂತೆ ವಿವೋ T3 5G (vivo T3 5G) ಮೊಬೈಲ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 5G ಮೊಬೈಲ್‌ ಫೀಚರ್ಸ್‌

ವಿವೋ T3 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್, ಹೆಚ್‌ಡಿಆರ್ 10+ ಸೌಲಭ್ಯ, 1800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಸೌಲಭ್ಯ ಕೂಡಾ ಪಡೆದಿದೆ.

ವಿವೋ T3 5G ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಪಡೆದಿದೆ. ಇದರೊಂದಿಗೆ 8GB RAM, 128GB ಹಾಗೂ 256GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಇವೆ. ಹಾಗೆಯೇ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್‌ ವಿಸ್ತರಿಸುವ ಸೌಲಭ್ಯ ಪಡೆದಿದೆ.

ವಿವೋ T3 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ.

ವಿವೋ T3 5G ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸರ್‌ ಆಯ್ಕೆಗಳನ್ನು ಒಳಗೊಂಡಿದೆ.

Best Mobiles in India

English summary
vivo T3 5G now available at amazing price drop on flipkart. Check offer Price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+