ನಾಳೆ ವಿವೋದ ಈ ಹೊಸ ಫೋನ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಪ್ರೈಸ್‌ಟ್ಯಾಗ್!
ಮೊಬೈಲ್ ಪ್ರಿಯರ ಗಮನ ಸೆಳೆದ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿರುವ ವಿವೋ (Vivo) ನೂತನವಾಗಿ ಬಿಡುಗಡೆ ಮಾಡಿರುವ ವಿವೋ T3 ಲೈಟ್ 5G (vivo T3 Lite 5G) ಫೋನ್ ಈಗಾಗಲೇ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಫಸ್ಟ್ ಸೇಲ್ ಮುಗಿಸಿದೆ. ಅಂದಹಾಗೆ ಈ ಮೊಬೈಲ್ ಮತ್ತೆ ನಾಳೆ (ಜುಲೈ 19 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮತ್ತೆ ಮಾರಾಟ ಪ್ರಾರಂಭ ಮಾಡಲಿದೆ. ಬಜೆಟ್ ಬೆಲೆಯೊಂದಿಗೆ ಗ್ರಾಹಕರನ್ನು ಆಕರ್ಷಿಸಿರುವ ಈ ಫೋನ್ 50 ಮೆಗಾಪಿಕ್ಸಲ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ.
ಹೌದು, ವಿವೋ ಕಂಪನಿಯ ವಿವೋ T3 ಲೈಟ್ 5G (vivo T3 Lite 5G) ಫೋನ್ ಇದೇ ಜುಲೈ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮತ್ತೆ ಸೇಲ್ ಶುರು ಮಾಡಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಲಭ್ಯ ಇರುವ ಎಲ್ಲ ಆಫರ್ ಪಡೆದುಕೊಂಡರೆ ಈ ಫೋನ್ ಅನ್ನು 9999ರೂ. ಗಳಿಗೆ ಖರೀದಿ ಮಾಡಬಹುದು.

ಇನ್ನು ಈ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ವೈಬ್ರೆಂಟ್ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್ ಕಲರ್ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ. ಹಾಗಾದರೇ ಇನ್ನುಳಿದಂತೆ ವಿವೋ T3 ಲೈಟ್ 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ವಿವೋ T3 ಲೈಟ್ 5G - ಫೀಚರ್ಸ್ ಮಾಹಿತಿ
ವಿವೋ T3 ಲೈಟ್ 5G ಸ್ಮಾರ್ಟ್‌ಫೋನ್ 6.56 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಪಡೆದುಕೊಂಡಿದೆ.
ವಿವೋ T3 ಲೈಟ್ 5G ಸ್ಮಾರ್ಟ್‌ಫೋನ್ 4 GB RAM + 128 GB ಹಾಗೂ 6 GB RAM + 128 GB ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಮೊಬೈಲ್‌ನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ.
ವಿವೋ T3 ಲೈಟ್ 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಸಾರವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








