ವಿವೋ T3 ಲೈಟ್ 5G ಫೋನ್ ಬೆಲೆಯಲ್ಲಿ ಬೊಂಬಾಟ್ ಇಳಿಕೆ; ಅಚ್ಚರಿಯ ಫೀಚರ್ಸ್!
ಲೀಡಿಂಗ್ ಇ ಕಾಮರ್ಸ್ ವೆಬ್‌ಸೈಟ್ ಎಂದು ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಫೋನ್‌ಗಳಿಗೆ ಏನಾದರೊಂದು ವಿಶೇಷ ರಿಯಾಯಿತಿ ನೀಡುತ್ತ ಸಾಗಿದೆ. ಅದರಲ್ಲಿಯೂ ಯಾವುದಾದರೂ ಹಬ್ಬ ಹಾಗೂ ವಿಶೇಷ ದಿನಗಳು ಬಂದಾಗ ಮತ್ತಷ್ಟು ಕೊಡುಗೆ ಲಭ್ಯ ಮಾಡುತ್ತದೆ. ಸದ್ಯ ಟೆಕ್ನೋ ಸಂಸ್ಥೆಯ ವಿವೋ T3 ಲೈಟ್ 5G (vivo T3 Lite 5G) ಫೋನ್ ಭಾರೀ ದರ ಕಡಿತದಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ವಿವೋ ಕಂಪನಿಯ ವಿವೋ T3 ಲೈಟ್ 5G ( vivo T3 Lite 5G ) ಮೊಬೈಲ್ ಶೇ. 25% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 11,499 ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಸಿಗಲಿದೆ.

ಇನ್ನು ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದರ ಜೊತೆಗೆ 15W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ವೈಬ್ರೆಂಟ್ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಈ ಫೋನ್ ಖರೀದಿಗೆ ಲಭ್ಯ ಆಗಲಿದೆ. ಹಾಗಾದರೇ ವಿವೋ T3 ಲೈಟ್ 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ T3 ಲೈಟ್ 5G - ಫೀಚರ್ಸ್
ವಿವೋ T3 ಲೈಟ್ 5G ಮೊಬೈಲ್ 6.56 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಮಾಡುತ್ತದೆ.
ಹಾಗೆಯೇ ಈ ಫೋನ್ 4GB RAM + 128 GB ಹಾಗೂ 6GB RAM + 128 GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಒಳಗೊಂಡಿದೆ.
ವಿವೋ T3 ಲೈಟ್ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.


Click it and Unblock the Notifications








