Home
ಸುದ್ದಿಜಾಲ

ಇಂದು ವಿವೋ T3 ಲೈಟ್‌ 5G ಮಾರಾಟ ಶುರು; ಅಗ್ಗದ ಬೆಲೆಗೆ ಸಖತ್‌ ಫೀಚರ್ಸ್‌!

ಭಿನ್ನ ಶ್ರೇಣಿಯ ಸ್ಮಾರ್ಟ್‌ಫೊನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ವಿವೋ (Vivo) ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ವಿವೋ T3 ಲೈಟ್‌ 5G (vivo T3 Lite 5G) ಎಂಟ್ರಿ ಲೆವೆಲ್‌ ಪ್ರೈಸ್‌ಟ್ಯಾಗ್‌ನಲ್ಲಿ ಗ್ರಾಹಕರನ್ನು ಆಕರ್ಷಿಸಿದೆ. ಅಂದಹಾಗೆ ಈ ಮೊಬೈಲ್‌ ಇಂದು (ಜುಲೈ 11 ರಂದು) ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮತ್ತೆ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿದೆ.

ಹೌದು, ವಿವೋ ಸಂಸ್ಥೆಯ ವಿವೋ T3 ಲೈಟ್‌ 5G (vivo T3 Lite 5G) ಮೊಬೈಲ್‌ ಇಂದು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮತ್ತೆ ಸೇಲ್‌ ಶುರು ಮಾಡಲಿದೆ. ಈ ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಜೊತೆಗೆ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಇನ್ನು ಈ ಮೊಬೈಲ್‌ನ ಆರಂಭಿಕ ವೇರಿಯಂಟ್‌ 4GB RAM + 128 GB ಆಯ್ಕೆಯಲ್ಲಿ ಇದೆ.

ಇಂದು ವಿವೋ T3 ಲೈಟ್‌ 5G ಮಾರಾಟ ಶುರು; ಅಗ್ಗದ ಬೆಲೆಗೆ ಸಖತ್‌ ಫೀಚರ್ಸ್‌!

ಹಾಗೆಯೇ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 15W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಹೊಂದಿದೆ. ಅಲ್ಲದೇ ಗ್ರಾಹಕರು ಈ ಫೋನ್‌ ವೈಬ್ರೆಂಟ್‌ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಈ ಫೋನ್‌ ಖರೀದಿಸಬಹುದು. ಇನ್ನುಳಿದಂತೆ ವಿವೋ T3 ಲೈಟ್‌ 5G ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 ಲೈಟ್‌ 5G - ಫೀಚರ್ಸ್‌ ಹೀಗಿವೆ

ವಿವೋ T3 ಲೈಟ್‌ 5G ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿದ್ದು, ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಮಾಡುತ್ತದೆ.

ವಿವೋ T3 ಲೈಟ್‌ 5G ಫೋನ್‌ 4 GB RAM + 128 GB ಹಾಗೂ 6 GB RAM + 128 GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ನೀಡಲಾಗಿದೆ.

ವಿವೋ T3 ಲೈಟ್‌ 5G ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.

Best Mobiles in India

English summary
vivo T3 Lite 5G goes on sale in india today via flipkart. check offer price, discount, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+