Home
ಸುದ್ದಿಜಾಲ

ನಾಳೆ ಎಂಟ್ರಿ ಕೊಡಲಿದೆ ವಿವೋದ ಈ ಹೊಸ ಫೋನ್‌; ಖರೀದಿಗೆ ಕ್ಯೂ ಖಚಿತ!

ಮೊಬೈಲ್‌ ಪ್ರಿಯರು ಕುತೂಹಲದಿಂದ ಎದುರುನೋಡುತ್ತಿರುವ ವಿವೋ T3 ಲೈಟ್‌ 5G (Vivo T3 Lite 5G) ಸ್ಮಾರ್ಟ್‌ಫೋನ್‌ ನಾಳೆ (ಜೂನ್ 27 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಎಂಟ್ರಿ ಕೊಡಲಿದೆ. ವಿವೋದ ಕಂಪನಿಯ ಈ ಸ್ಮಾರ್ಟ್‌ಫೋನ್ ಬಜೆಟ್‌ ಬೆಲೆಯಲ್ಲಿ ಲಗ್ಗೆ ಇಡುವ ಸೂಚನೆಗಳಿದ್ದು, ಮಾರುಕಟ್ಟೆಯಲ್ಲಿ ಸದ್ದು ಮಾಡುವ ಲಕ್ಷಣಗಳನ್ನು ಹೊರಹಾಕಿದೆ. ಇನ್ನು ಈ ಫೋನ್‌ 5000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು, ಇದರ ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುವುದು ಬಹುತೇಕ ಖಚಿತ ಎನ್ನಲಾಗಿದೆ.

ಹೌದು, ವಿವೋ ಸಂಸ್ಥೆಯ ವಿವೋ T3 ಲೈಟ್‌ 5G (Vivo T3 Lite 5G) ಫೋನ್‌ ದೇಶಿಯ ಮಾರುಕಟ್ಟೆಯಲ್ಲಿ ನಾಳೆ ಬಿಡುಗಡೆ ಆಗಲಿದೆ. ಈ ಫೋನ್‌ ಬಿಡುಗಡೆಯ ಕುರಿತು ದೈತ್ಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೈಕ್ರೋ ಸೈಟ್‌ ಕೂಡಾ ತೆರೆದಿದೆ. ಸ್ಟೈಲಿಶ್‌ ಲುಕ್‌ ಜೊತೆಗೆ ಈ ಫೋನ್‌ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಸೋನಿ AI ಕ್ಯಾಮೆರಾ ರಚನೆ ಪಡೆದಿರುವುದು ಖಚಿತ ಎಂದು ತಿಳಿದುಬಂದಿದೆ.

ನಾಳೆ ಎಂಟ್ರಿ ಕೊಡಲಿದೆ ವಿವೋದ ಈ ಹೊಸ ಫೋನ್‌; ಖರೀದಿಗೆ ಕ್ಯೂ ಖಚಿತ!

ಹಾಗೆಯೇ ವಿವೋ T3 ಲೈಟ್‌ 5G ಫೋನ್‌ ಎರಡು ಕಲರ್‌ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶ ಮಾಡಲಿದ್ದು, ಅವುಗಳು ಕ್ರಮವಾಗಿ ವೈಬ್ರೆಂಟ್‌ ಗ್ರೀನ್‌ ಹಾಗೂ ಮೆಜೆಸ್ಟಿಕ್‌ ಬ್ಲ್ಯಾಕ್‌ ಕಲರ್‌ ಆಯ್ಕೆ ಆಗಿರಲಿವೆ. ಹಾಗೆಯೇ 15W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರುವ ಸಾಧ್ಯತೆ ಹೆಚ್ಚಿದೆ. ಇನ್ನುಳಿದಂತೆ ವಿವೋ T3 ಲೈಟ್‌ 5G ಫೋನಿನ ಇತರೆ ನಿರೀಕ್ಷಿತ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T3 ಲೈಟ್‌ 5G - ನಿರೀಕ್ಷಿತ ಫೀಚರ್ಸ್‌

ವಿವೋ T3 ಲೈಟ್‌ 5G ಮೊಬೈಲ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿರಲಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ ಸಾಧ್ಯತೆ ಇದೆ. ಅಲ್ಲದೇ 90Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿರುವ ಸಾಧ್ಯತೆಗಳು ಇವೆ. ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಪಡೆದಿರಲಿದೆ.

ಹಾಗೆಯೇ ಈ ಫೋನ್‌ 4GB RAM + 128GB ಹಾಗೂ 6GB RAM + 128GB ಸ್ಟೋರೇಜ್‌ ಆಯ್ಕೆ ಒಳಗೊಂಡಿರುವ ನಿರೀಕ್ಷೆಗಳು ಇವೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿರಲಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿರಲಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ನಿರೀಕ್ಷೆ ಇದೆ.

ವಿವೋ T3 ಲೈಟ್‌ 5G ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿರುವ ನಿರೀಕ್ಷೆಗಳು ಹೆಚ್ಚಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ-ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿರಲಿದೆ.

Best Mobiles in India

English summary
Vivo T3 Lite 5G is launching in India Tomorrow. Check Expected Specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+