Home
ಸುದ್ದಿಜಾಲ

ಇದೇ ಜುಲೈ 11ರಂದು ಈ ಅಗ್ಗದ ವಿವೋ ಫೋನ್‌ ಮತ್ತೆ ಖರೀದಿಗೆ ಲಭ್ಯ!

ಜನಪ್ರಿಯ ವಿವೋ ಮೊಬೈಲ್‌ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಲಾಂಚ್ ಮಾಡಿರುವ ವಿವೋ T3 ಲೈಟ್‌ 5G (vivo T3 Lite 5G) ಮೊಬೈಲ್‌ ಕಡಿಮೆ ಬೆಲೆ ಹಾಗೂ ಸ್ಟೈಲಿಶ್‌ ಡಿಸೈನ್‌ ಮೂಲಕ ಆಕರ್ಷಕ ಎನಿಸಿದೆ. ಈ ಮೊಬೈಲ್‌ನ ಇದೇ ಜುಲೈ 11 ರಂದು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮತ್ತೆ ಮಾರಾಟ ಪ್ರಾರಂಭ ಮಾಡಲಿದೆ. ಅಂದಹಾಗೆ ವಿವೋ T3 ಲೈಟ್‌ 5G ಫೋನಿನ 4GB RAM + 128 GB ವೇರಿಯಂಟ್‌ನ ಬೆಲೆಯು 10,499 ರೂ. ಗಳು ಆಗಿದೆ.

ಹೌದು, ವಿವೋ ಸಂಸ್ಥೆಯ ವಿವೋ T3 ಲೈಟ್‌ 5G (vivo T3 Lite 5G) ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮತ್ತೆ ಸೇಲ್‌ ಶುರು ಮಾಡಲಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ.

ಇದೇ ಜುಲೈ 11ರಂದು ಈ ಅಗ್ಗದ ವಿವೋ ಫೋನ್‌ ಮತ್ತೆ ಖರೀದಿಗೆ ಲಭ್ಯ!

ಹಾಗೆಯೇ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದರ ಜೊತೆಗೆ 15W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಒಳಗೊಂಡಿದೆ. ಅಲ್ಲದೇ ಈ ಫೋನ್‌ ವೈಬ್ರೆಂಟ್‌ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಈ ಫೋನ್‌ ಖರೀದಿಗೆ ದೊರೆಯುತ್ತದೆ. ಇನ್ನುಳಿದಂತೆ ವಿವೋ T3 ಲೈಟ್‌ 5G ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 ಲೈಟ್‌ 5G ಮೊಬೈಲ್‌ - ಫೀಚರ್ಸ್‌

ವಿವೋ T3 ಲೈಟ್‌ 5G ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿದ್ದು, ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಮಾಡುತ್ತದೆ.

ವಿವೋ T3 ಲೈಟ್‌ 5G ಫೋನ್‌ 4 GB RAM + 128 GB ಹಾಗೂ 6 GB RAM + 128 GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ಒದಗಿಸಲಾಗಿದೆ.

ವಿವೋ T3 ಲೈಟ್‌ 5G ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.

Best Mobiles in India

English summary
Vivo T3 Lite 5G next sale start on July 11. Know here about Price Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+