ಇದೇ ಜುಲೈ 19ಕ್ಕೆ Vivo ಸಂಸ್ಥೆಯ ಈ ಹೊಸ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ!
ದೇಶದ ಮೊಬೈಲ್ ಮಾರುಕಟ್ಟೆಯಲ್ಲಿ ಜನಪ್ರಿಯ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ವಿವೋ (Vivo) ಇತ್ತೀಚಿಗಷ್ಟೆ ಲಾಂಚ್ ಮಾಡಿರುವ ವಿವೋ T3 ಲೈಟ್ 5G (vivo T3 Lite 5G) ಮೊಬೈಲ್ ಈಗಾಗಲೇ ಮೊಬೈಲ್ ಪ್ರಿಯ ಗ್ರಾಹಕರನ್ನು ಆಕರ್ಷಿಸಿದ್ದು, ಫ್ಲಿಪ್‌ಕಾರ್ಟ್ ತಾಣದ ಮೂಲಕ ಫಸ್ಟ್ ಸೇಲ್ ಸಹ ನಡೆಸಿದೆ. ಅಂದಹಾಗೆ ಈ ಮೊಬೈಲ್ ಮತ್ತೆ ಇದೇ ಜುಲೈ 19 ರಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮತ್ತೆ ಮಾರಾಟ ಪ್ರಾರಂಭ ಮಾಡಲಿದೆ.
ಹೌದು, ವಿವೋ ಕಂಪನಿಯ ವಿವೋ T3 ಲೈಟ್ 5G (vivo T3 Lite 5G) ಫೋನ್ ಇದೇ ಜುಲೈ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮತ್ತೆ ಸೇಲ್ ಶುರು ಮಾಡಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಲಭ್ಯ ಇರುವ ಎಲ್ಲ ಆಫರ್ ಪಡೆದುಕೊಂಡರೆ ಈ ಫೋನ್ ಅನ್ನು 9999ರೂ. ಗಳಿಗೆ ಖರೀದಿ ಮಾಡಬಹುದು.

ಇನ್ನು ಈ ಫೋನ್ ವೈಬ್ರೆಂಟ್ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಈ ಮೊಬೈಲ್ ಖರೀದಿಗೆ ಸಿಗಲಿದೆ. ಇದಲ್ಲದೇ ಈ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ವಿವೋ T3 ಲೈಟ್ 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ವಿವೋ T3 ಲೈಟ್ 5G - ಫೀಚರ್ಸ್ ಹೀಗಿವೆ
ವಿವೋ T3 ಲೈಟ್ 5G ಫೋನ್ 6.56 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಪಡೆದುಕೊಂಡಿದೆ.
ವಿವೋ T3 ಲೈಟ್ 5G ಫೋನ್ 4 GB RAM + 128 GB ಹಾಗೂ 6 GB RAM + 128 GB ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಮೊಬೈಲ್‌ನ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಒದಗಿಸಲಾಗಿದೆ.
ವಿವೋ T3 ಲೈಟ್ 5G ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಸಾರವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








