ವಿವೋ T3 ಲೈಟ್ 5G ಮೊಬೈಲ್ ಬೆಲೆಯಲ್ಲಿ ಬೊಂಬಾಟ್ ಇಳಿಕೆ; ಆಕರ್ಷಕ ಫೀಚರ್ಸ್!
ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಸ್ಪೆಷಲ್ ಮೇಳಗಳ ಮೂಲಕ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ಕೊಡುಗೆಗಳನ್ನು ಘೋಷಿಸಿ, ಗ್ರಾಹಕರ ಗಮನ ಸೆಳೆಯುತ್ತದೆ. ಇದೀಗ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಆಯ್ದ ಕೆಲವು ಮೊಬೈಲ್‌ಗಳಿಗೆ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ. ಆ ಪೈಕಿ ವಿವೋ ಕಂಪನಿಯ ವಿವೋ T3 ಲೈಟ್ 5G ( vivo T3 Lite 5G ) ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ವಿವೋ ಸಂಸ್ಥೆಯ ವಿವೋ T3 ಲೈಟ್ 5G ( vivo T3 Lite 5G ) ಫೋನ್ ಶೇ. 27% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 10,499 ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಕೂಡಾ ಸಿಗಲಿದೆ.

ಇನ್ನು ಈ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದರ ಜೊತೆಗೆ 15W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್ ವೈಬ್ರೆಂಟ್ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಈ ಫೋನ್ ಖರೀದಿಗೆ ಲಭ್ಯ ಆಗಲಿದೆ. ಹಾಗಾದರೇ ವಿವೋ T3 ಲೈಟ್ 5G ( vivo T3 Lite 5G ) ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ T3 ಲೈಟ್ 5G - ಫೀಚರ್ಸ್ ಮಾಹಿತಿ
ವಿವೋ T3 ಲೈಟ್ 5G ಫೋನ್ 6.56 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 90 Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಮಾಡುತ್ತದೆ.
ವಿವೋ T3 ಲೈಟ್ 5G ಫೋನ್ 4 GB RAM + 128 GB ಹಾಗೂ 6 GB RAM + 128 GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಎರಡು ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಒಳಗೊಂಡಿದೆ.
ವಿವೋ T3 ಲೈಟ್ 5G ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಮೊಬೈಲ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್ - ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.


Click it and Unblock the Notifications








