Vivo T3 Lite 5G ಫೋನ್ ಈಗ 10,000ರೂ. ಒಳಗೆ ಲಭ್ಯ..ಈ ಆಫರ್ ಬಿಡಬೇಡಿ!
ಪ್ರಮುಖ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಗಳಲ್ಲಿ ಒಂದಾಗಿರುವ ಫ್ಲಿಪ್‌ಕಾರ್ಟ್ ತಾಣವು ಆಯೋಜಿಸಿರುವ ಬಿಗ್ ದೀಪಾವಳಿ ಸೇಲ್ ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆದಿದೆ. ಈ ಹಬ್ಬದ ಮಾರಾಟದಲ್ಲಿ ಆಯ್ದ ಕೆಲವು ನೂತನ ಮೊಬೈಲ್‌ಗಳು ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರಿಗೆ ಖುಷಿ ನೀಡಿದೆ. ಆ ಪೈಕಿ ಫ್ಲಿಪ್‌ಕಾರ್ಟ್ ತಾಣದಲ್ಲಿ ವಿವೋ ಸಂಸ್ಥೆಯು ವಿವೋ T3 ಲೈಟ್ 5G (vivo T3 Lite 5G) ಮೊಬೈಲ್ ಆಕರ್ಷಕ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ವಿವೋ T3 ಲೈಟ್ 5G (vivo T3 Lite 5G) ಫೋನ್ ಶೇ. 27% ನೇರ ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 4 GB RAM + 128 GB ವೇರಿಯಂಟ್ 10,499ರೂ. ಗಳ ಸಖತ್ ಡಿಸ್ಕೌಂಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇದರ ಜೊತೆಗೆ ಗ್ರಾಹಕರು ಬ್ಯಾಂಕ್ ಆಫರ್ ಸಹ ಪಡೆದುಕೊಂಡರೆ, ಈ ಫೋನ್ ಅನ್ನು 9,499ರೂ. ಬೆಲೆಯಲ್ಲಿ ಖರೀದಿಸಬಹುದು.

ವಿವೋ ಸಂಸ್ಥೆಯ ಈ ಫೋನ್ ವೈಬ್ರೆಂಟ್ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್ ಕಲರ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದರ ಜೊತೆಗೆ 15W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಹಾಗಾದರೇ ವಿವೋ T3 ಲೈಟ್ 5G (vivo T3 Lite 5G) ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ವಿವೋ T3 ಲೈಟ್ 5G - ಫೀಚರ್ಸ್ ಮಾಹಿತಿ
ವಿವೋ T3 ಲೈಟ್ 5G ಫೋನ್ 6.56 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಮಾಡುತ್ತದೆ.
ವಿವೋ T3 ಲೈಟ್ 5G ಫೋನ್ 4GB RAM + 128 GB ಹಾಗೂ 6GB RAM + 128 GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಒಳಗೊಂಡಿದೆ.
ವಿವೋ T3 ಲೈಟ್ 5G ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.


Click it and Unblock the Notifications








