Home
ಸುದ್ದಿಜಾಲ

ನಿಮಗೆ Vivo ಮೊಬೈಲ್‌ ಇಷ್ಟವೇ?..ಹಾಗಿದ್ರೆ, ಈ ಆಫರ್‌ ಮಿಸ್‌ ಮಾಡ್ಕೋಬೇಡಿ!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬ್ಲ್ಯಾಕ್‌ ಫ್ರೈಡ್‌ ಮಾರಾಟ ಲೈವ್‌ ಇದ್ದು, ಈ ಸೇಲ್‌ನಲ್ಲಿ ಆಯ್ದ ಕೆಲವು ಜನಪ್ರಿಯ ಮೊಬೈಲ್‌ಗಳು ಗಮನಾರ್ಹ ಆಫರ್‌ ದರದಲ್ಲಿ ಕಾಣಿಸಿಕೊಂಡಿವೆ. ಈ ವಿಶೇಷ ಸೇಲ್‌ನಲ್ಲಿ ಇತ್ತೀಚಿನ ಕೆಲವು ಹೊಸ ಫೋನ್‌ ಖರೀದಿಸುವ ಗ್ರಾಹಕರು ಬ್ಯಾಂಕ್‌ ಆಫರ್‌ ಮೂಲಕ ಮತ್ತಷ್ಟು ಡಿಸ್ಕೌಂಟ್‌ ಪಡೆಯಬಹುದು. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T3 ಲೈಟ್‌ 5G ( vivo T3 Lite 5G ) ಮೊಬೈಲ್‌ OMG ಎನ್ನುವ ಬೆಲೆಯಲ್ಲಿ ಖರೀದಿಗೆ ಲಭ್ಯ.

ಹೌದು, ದಿಗ್ಗಜ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ವಿವೋ T3 ಲೈಟ್‌ 5G ( vivo T3 Lite 5G ) ಫೋನ್‌ ಶೇ. 25% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 6GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 11,499ರೂ. ಗಳ ಕೊಡುಗೆಯ ದರದಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್‌ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು.

ನಿಮಗೆ Vivo ಮೊಬೈಲ್‌ ಇಷ್ಟವೇ?..ಹಾಗಿದ್ರೆ, ಈ ಆಫರ್‌ ಮಿಸ್‌ ಮಾಡ್ಕೋಬೇಡಿ!

ಈ ಮೊಬೈಲ್‌ ವೈಬ್ರೆಂಟ್‌ ಗ್ರೀನ್ ಮತ್ತು ಮೆಜೆಸ್ಟಿಕ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದರ ಜೊತೆಗೆ 15W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ವಿವೋ T3 ಲೈಟ್‌ 5G ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹಾಗೂ ಪ್ರೊಸೆಸರ್‌

ವಿವೋ T3 ಲೈಟ್‌ 5G ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಅಲ್ಲದೇ 90Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿದ್ದು, ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು ಅಪ್ದಡೇಟ್‌ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಪಡೆದುಕೊಂಡಿದೆ.

ಮೆಮೊರಿ ಹಾಗೂ ಕ್ಯಾಮೆರಾ

ವಿವೋ T3 ಲೈಟ್‌ 5G ಫೋನ್‌ 4GB RAM + 128 GB ಹಾಗೂ 6GB RAM + 128 GB ಸ್ಟೋರೇಜ್‌ ಆಯ್ಕೆ ಇದೆ. ಹಾಗೆಯೇ ಇದು ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಹೊಂದಿದೆ. ಅಲ್ಲದೇ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌

ವಿವೋ T3 ಲೈಟ್‌ 5G ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಹೊಂದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+