ವಿವೋ ಫೋನ್ ಖರೀದಿಸುವವರಿಗೆ ಸಿಹಿಸುದ್ದಿ!..ಈ ಬೆಸ್ಟ್ ಕ್ಯಾಮೆರಾ ಫೋನ್ ಬೆಲೆಯಲ್ಲಿ ಇಳಿಕೆ!
ದಿಗ್ಗಜ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಇದೀಘ ಬಿಗ್ ಬಚತ್ ಡೇಸ್ ಮಾರಾಟ ಚಾಲ್ತಿ ಇದೆ. ಈ ವಿಶೇಷ ಸೇಲ್‌ನಲ್ಲಿ ಕೆಲವು ಆಯ್ದ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯ ಮಾಡಲಾಗಿದೆ. ಎಲ್ಲ ವಿಭಾಗದ ಮೊಬೈಲ್‌ಗಳು ಕೂಡಾ ಭಾರೀ ರಿಯಾಯಿತಿ ದರದಲ್ಲಿ ಗ್ರಾಹಕರನ್ನು ಸೆಳೆಯುವಂತೆ ಇವೆ. ಆ ಪೈಕಿ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ T3 ಪ್ರೊ 5G ಮೊಬೈಲ್ (vivo T3 Pro 5G) ಮೊಬೈಲ್ ಬೊಂಬಾಟ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಲೀಡಿಂಗ್ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ತಾಣದಲ್ಲಿ ವಿವೋ T3 ಪ್ರೊ 5G ಮೊಬೈಲ್ (vivo T3 Pro 5G) ಫೋನ್ ಶೇ. 16% ರಷ್ಟು ನೇರ ರಿಯಾಯಿತಿ ಹೊಂದಿದೆ. ಈ ಮೊಬೈಲ್‌ನ 8 GB RAM + 128 GB ಸ್ಟೋರೇಜ್ ವೇರಿಯಂಟ್ 24,999ರೂ. ಗಳ ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಇತರೆ ಆಯ್ದ ಬ್ಯಾಂಕ್ ಕೊಡುಗೆಗಳು ಕೂಡಾ ಗ್ರಾಹಕರಿಗೆ ದೊರೆಯುತ್ತವೆ.

ಈ ಸ್ಮಾರ್ಟ್‌ಫೋನ್ 8GB + 128GB ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಅಲ್ಲದೇ ಇದು 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಇನ್ನುಳಿದಂತೆ ವಿವೋ T3 ಪ್ರೊ 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಡಿಸ್‌ಪ್ಲೇ ರಚನೆ ಮಾಹಿತಿ
ವಿವೋ T3 ಪ್ರೊ 5G ಫೋನ್ 6.67 ಇಂಚಿನ 3D ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಕೂಡಾ ಪಡೆದಿದೆ.
ಪ್ರೊಸೆಸರ್ ಪವರ್ ಯಾವುದು
ವಿವೋ T3 ಪ್ರೊ 5G ಫೋನ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಪವರ್ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಇದರ ಜೊತೆಗೆ 8 GB RAM + 128 GB ಹಾಗೂ 8 GB + 256 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಇವೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ
ವಿವೋ T3 ಪ್ರೊ 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇನ್ನು ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಜೊತೆಗೆ ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ.
ಬ್ಯಾಟರಿ ಬ್ಯಾಕ್‌ಅಪ್
ವಿವೋ T3 ಪ್ರೊ 5G ಫೋನ್ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.


Click it and Unblock the Notifications








