Home
ಸುದ್ದಿಜಾಲ

ಟ್ರೆಂಡಿಂಗ್‌ನಲ್ಲಿ ಇರುವ ಈ ಹೊಸ Vivo ಫೋನಿನ ಸೇಲ್‌ ಸೆಪ್ಟೆಂಬರ್ 3 ರಂದು ಪ್ರಾರಂಭ!

ವಿವೋ (Vivo) ಕಂಪನಿಯ ಹೊಸ ವಿವೋ T3 ಪ್ರೊ 5G (Vivo T3 Pro 5G) ಮೊಬೈಲ್‌ ಈಗಾಗಲೇ ಬಜೆಟ್‌ ದರದಲ್ಲಿ ಅತ್ಯುತ್ತಮ ಫೀಚರ್ಸ್‌ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ಇದೇ ಸೆಪ್ಟೆಂಬರ್ 3 ರಂದು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಈ ಫೋನ್‌ ಸ್ಯಾಂಡ್‌ಸ್ಟೋನ್‌ ಆರೇಂಜ್‌ ಲೆದರ್‌ ಹಾಗೂ ಮೆಟ್ ಫಿನಿಶ್‌ ಕಲರ್‌ ಆಯ್ಕೆ ಅನ್ನು ಪಡೆದುಕೊಂಡಿದೆ.

ಹೌದು, ವಿವೋ ಸಂಸ್ಥೆಯ ವಿವೋ T3 ಪ್ರೊ 5G (Vivo T3 Pro 5G) ಸ್ಮಾರ್ಟ್‌ಫೋನ್‌ ಸೆಪ್ಟೆಂಬರ್ 3 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮಾರಾಟ ಶುರು ಮಾಡಲಿದೆ. ಈ ಮೊಬೈಲ್‌ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಅಲ್ಲದೇ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ.

ಟ್ರೆಂಡಿಂಗ್‌ನಲ್ಲಿ ಇರುವ ಈ ಹೊಸ Vivo ಫೋನಿನ ಸೇಲ್‌ ಸೆಪ್ಟೆಂಬರ್ 3 ರಂದು ಪ್ರಾರಂಭ

ಇನ್ನು ಈ ಮೊಬೈಲ್‌ 8GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನಿನ ಪ್ರಾರಂಭಿಕ ವೇರಿಯಂಟ್‌ ಬೆಲೆಯು 21,999ರೂ. ಗಳು ಪ್ರೈಸ್‌ಟ್ಯಾಗ್‌ ಪಡೆದಿದೆ. ಇನ್ನುಳಿದಂತೆ ಈ ವಿವೋ ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 ಪ್ರೊ 5G - ಫೀಚರ್ಸ್‌ ಹೀಗಿವೆ
ವಿವೋ T3 ಪ್ರೊ 5G ಫೋನ್‌ 6.67 ಇಂಚಿನ 3D ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್, 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಸೌಲಭ್ಯ ಕೂಡಾ ಪಡೆದಿದೆ.

ವಿವೋ T3 ಪ್ರೊ 5G ಫೋನ್‌ ಸ್ನಾಪ್‌ಡ್ರಾಗನ್ 7 ಜೆನ್‌ 3 SoC ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಪಡೆದಿದೆ. ಇದರೊಂದಿಗೆ 8 GB RAM + 128 GB ಹಾಗೂ 8 GB + 256 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಇವೆ.

ವಿವೋ T3 ಪ್ರೊ 5G ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಜೊತೆಗೆ ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ.

ವಿವೋ T3 ಪ್ರೊ 5G ಫೋನ್‌ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸರ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+