Home
ಸುದ್ದಿಜಾಲ

ವಿವೋ T3 ಪ್ರೊ 5G ಮೊಬೈಲ್‌ ಬೆಲೆಯಲ್ಲಿ ಈಗ ಭಾರೀ ಇಳಿಕೆ!

ಜನಪ್ರಿಯ ವಿವೋ ಮೊಬೈಲ್‌ ಕಂಪನಿಯು ಭಿನ್ನ ಶ್ರೇಣಿಯಲ್ಲಿ ಈಗಾಗಲೇ ಹಲವು ಮೊಬೈಲ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯ ವಿವೋ T3 ಪ್ರೊ 5G (vivo T3 Pro 5G) ಮೊಬೈಲ್‌ ಈಗ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ. ಅಂದಹಾಗೆ ಈ ಫೋನ್‌ ಮೀಡ್‌ರೇಂಜ್‌ ವಿಭಾಗದಲ್ಲಿ ಕಾಣಿಸಿಕೊಂಡಿದೆ. ಸದ್ಯ ವಿವೋ T3 ಪ್ರೊ 5G (vivo T3 Pro 5G) ಮೊಬೈಲ್‌ ಫ್ಲಿಪ್‌ಕಾರ್ಟ್‌ನಲ್ಲಿ ಆಕರ್ಷಕ ಆಫರ್‌ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ವಿವೋ T3 ಪ್ರೊ 5G (vivo T3 Pro 5G) ಮೊಬೈಲ್‌ ಶೇ. 16% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ 24,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಇತರೆ ಆಯ್ದ ಬ್ಯಾಂಕ್‌ ಕೊಡುಗೆಗಳು ಕೂಡಾ ಗ್ರಾಹಕರಿಗೆ ಸಿಗಲಿವೆ.

ವಿವೋ T3 ಪ್ರೊ 5G ಮೊಬೈಲ್‌ ಬೆಲೆಯಲ್ಲಿ ಈಗ ಭಾರೀ ಇಳಿಕೆ!

ಈ ಮೊಬೈಲ್‌ 8GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಅನ್ನು ಪಡೆದಿದೆ. ಹಾಗಾದರೇ ವಿವೋ T3 ಪ್ರೊ 5G ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 ಪ್ರೊ 5G ಫೀಚರ್ಸ್‌ ಮಾಹಿತಿ
ವಿವೋ T3 ಪ್ರೊ 5G ಮೊಬೈಲ್‌ 6.67 ಇಂಚಿನ 3D ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್, 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಸೌಲಭ್ಯ ಕೂಡಾ ಪಡೆದಿದೆ.

ವಿವೋ T3 ಪ್ರೊ 5G ಮೊಬೈಲ್‌ ಸ್ನಾಪ್‌ಡ್ರಾಗನ್ 7 ಜೆನ್‌ 3 SoC ಪ್ರೊಸೆಸರ್‌ ಪವರ್‌ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಪಡೆದಿದೆ. ಇದರ ಜೊತೆಗೆ 8 GB RAM + 128 GB ಹಾಗೂ 8 GB + 256 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಇವೆ.

ವಿವೋ T3 ಪ್ರೊ 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಜೊತೆಗೆ ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ.

ವಿವೋ T3 ಪ್ರೊ 5G ಮೊಬೈಲ್‌ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸಾರ್‌ ಆಯ್ಕೆಗಳನ್ನು ಒಳಗೊಂಡಿದೆ.

Best Mobiles in India

English summary
vivo T3 Pro 5G received Biggest Price Cut in india. Check offer, Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+