ಶೀಘ್ರದಲ್ಲೇ Vivo T3 Pro 5G ಲಾಂಚ್; ಮಾರುಕಟ್ಟೆಯಲ್ಲಿ ಸಂಚಲನ ಪಕ್ಕಾ!
ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ ಸಂಸ್ಥೆಯು ಭಿನ್ನ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ವಿವೋ ಸಂಸ್ಥೆಯು ಇದೀಗ ಮತ್ತೊಂದು ಹೊಸ ಫೋನ್ ಅನ್ನು ಪರಿಚಯಿಸಲು ಸಜ್ಜಾಗಿದೆ. ಅದುವೇ ವಿವೋ T3 ಪ್ರೊ 5G ( Vivo T3 Pro 5G ). ಈ ಸರಣಿಯು ವಿವೋ T3 ಸರಣಿಯ ಮುಂದುವರಿದ ಭಾಗವಾಗಿದೆ. ಇನ್ನು ಈ ನೂತನ ಫೋನ್ ಬಿಡುಗಡೆಗೂ ಮುನ್ನವೇ ಅದರ ಕೆಲವು ಫೀಚರ್ಸ್‌ಗಳು ಬಹಿರಂಗವಾಗಿದ್ದು, ಮೊಬೈಲ್ ಪ್ರಿಯರಲ್ಲಿ ಕುತೂಹಲ ಮೂಡಿಸಿದೆ.
ಹೌದು, ವಿವೋ ಸಂಸ್ಥೆಯು ಹೊಸದಾಗಿ ವಿವೋ T3 ಪ್ರೊ 5G ( Vivo T3 Pro 5G ) ಲಾಂಚ್ ಮಾಡಲು ಸಕಲ ಸಜ್ಜಾಗಿದ್ದು, ಶೀಘ್ರದಲ್ಲೇ ಮಾರುಕಟ್ಟೆಗೆ ಪರಿಚಯಿಸುವುದು ಪಕ್ಕಾ ಆಗಿದೆ. ಲೀಕ್ ಮಾಹಿತಿಗಳ ಪ್ರಕಾರ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 3 SoC ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಪಡೆದಿರುವುದು ಕೂಡಾ ಬಹುತೇಕ ಖಚಿತ ಆಗಿದೆ.

ವಿವೋ T3 ಪ್ರೊ 5G - ನಿರೀಕ್ಷಿತ ಫೀಚರ್ಸ್
ವಿವೋ T3 ಪ್ರೊ 5G ( Vivo T3 Pro 5G ) ಫೋನ್ 3D ಕರ್ವ್ಡ್ AMOLED ಡಿಸ್‌ಪ್ಲೇ ರಚನೆ ಅನ್ನು ಪಡೆದಿರಲಿದ್ದು, ಹಾಗೆಯೇ ಇದು 8GB RAM ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಒಳಗೊಂಡಿರಲಿದೆ. ಇನ್ನು ಕೆಲವು ಮೂಲಗಳ ಪ್ರಕಾರ, ವಿವೋ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಸಪೋರ್ಟ್ ಜೊತೆಗೆ 50 ಮೆಗಾ ಪಿಕ್ಸಲ್ ಸೌಲಭ್ಯದ ಸೋನಿ IMX 882 ಪ್ರಾಥಮಿಕ ಕ್ಯಾಮೆರಾ ಪಡೆದಿರಲಿದೆ.
ಹಾಗೆಯೇ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 3 SoC ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಒಳಗೊಂಡಿರಲಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಪಡೆದಿರಲಿದೆ. ಅಲ್ಲದೇ ಇದು 5,500 mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 80W ಫ್ಲ್ಯಾಶ್‌ಚಾರ್ಜ್ ವೈರ್ಡ್ ಚಾರ್ಜಿಂಗ್ ವ್ಯವಸ್ಥೆ ಪಡೆದಿರಲಿರುವ ನಿರೀಕ್ಷೆಗಳು ಇವೆ.
ವಿವೋ T3 5G ಫೋನಿನ ಫೀಚರ್ಸ್
ವಿವೋ T3 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್, ಹೆಚ್‌ಡಿಆರ್ 10+ ಸೌಲಭ್ಯ, 1800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಕೂಡಾ ಒಳಗೊಂಡಿದೆ. ಇದರೊಂದಿಗೆ 8GB RAM, 128GB ಹಾಗೂ 256GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಇವೆ.
ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಬಲದಲ್ಲಿ ಕಾರ್ಯ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಸಹ ಪಡೆದಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ.


Click it and Unblock the Notifications








