Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಈ Vivo ಫೋನ್‌ ಮತ್ತೆ ಖರೀದಿಗೆ ಲಭ್ಯ!

ಜನಪ್ರಿಯ ಮೊಬೈಲ್‌ ಕಂಪನಿಗಳ ಪೈಕಿ ಒಂದಾಗಿರುವ ವಿವೋ (Vivo) ಸಂಸ್ಥೆಯು ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿರುವ ವಿವೋ T3 ಅಲ್ಟ್ರಾ (Vivo T3 Ultra) ಮೊಬೈಲ್‌ ಈಗಾಗಲೇ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮೊದಲ ಸೇಲ್‌ ಕಂಡಿದೆ. ಮೀಡ್‌ರೇಂಜ್‌ ಬೆಲೆಯ ಜೊತೆಗೆ ಆಕರ್ಷಕ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಈ ಫೋನ್‌ ಇದೇ ಸೆಪ್ಟೆಂಬರ್ 26 ರಂದು ಮತ್ತೆ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ ಮೂಲಕ ಪ್ರಾರಂಭ ಮಾಡಲಿದೆ.

ಹೌದು, ವಿವೋ ಸಂಸ್ಥೆಯ ವಿವೋ T3 ಅಲ್ಟ್ರಾ (Vivo T3 Ultra) ಮೊಬೈಲ್‌ ಇದೇ ಸೆಪ್ಟೆಂಬರ್ 26 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಅಂದಹಾಗೆ ಮೀಡ್‌ರೇಂಜ್‌ ಪ್ರೈಟ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುವ ಈ ಫೋನಿನ ಮೂರು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ.

ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಈ Vivo ಫೋನ್‌ ಮತ್ತೆ ಖರೀದಿಗೆ ಲಭ್ಯ!

ಈ ನೂತನ ವಿವೋ T3 ಅಲ್ಟ್ರಾ ಫೋನ್‌ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಲಸಿದೆ. ಹಾಗಾದರೇ ವಿವೋ T3 ಅಲ್ಟ್ರಾ (Vivo T3 Ultra) ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T3 ಅಲ್ಟ್ರಾ ಮೊಬೈಲ್‌ - ಫೀಚರ್ಸ್‌

ವಿವೋ T3 ಅಲ್ಟ್ರಾ ಫೋನ್‌ 6.78 ಇಂಚಿನ 3D ಕರ್ವ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2800 x 1260 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿದ್ದು, ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಮಾಡುತ್ತದೆ.

ವಿವೋ T3 ಅಲ್ಟ್ರಾ ಮೊಬೈಲ್ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಫಸ್ಟ್ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ಪಡೆದಿದೆ.

ವಿವೋ T3 ಅಲ್ಟ್ರಾ ಮೊಬೈಲ್‌ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.

ಮೆಮೊರಿ ಹಾಗೂ ಕಲರ್
ವಿವೋ T3 ಅಲ್ಟ್ರಾ ಮೊಬೈಲ್‌ 8GB + 128GB ವೇರಿಯಂಟ್‌, 8GB + 256GB ವೇರಿಯಂಟ್‌ ಹಾಗೂ 12GB + 256GB ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಗ್ರಾಹಕರು ಈ ಫೋನ್‌ ಗ್ರೀನ್‌ ಹಾಗೂ ಗ್ರೇ ಕಲರ್‌ ಆಯ್ಕೆಯಲ್ಲಿ ಖರೀದಿಸಬಹುದು.

Best Mobiles in India

English summary
Vivo T3 Ultra 5G Next Sale Starts on September 26 via Flipkart. Check offer, price and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+