ಇಂದು Vivo T3 Ultra ಸೇಲ್ ಪ್ರಾರಂಭ; ಬೆಲೆ ಎಷ್ಟು?..ಏನಾದ್ರೂ ಆಫರ್ ಇದೆಯಾ?
ವಿವೋ ಮೊಬೈಲ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸದಾಗಿ ಪರಿಚಯಿಸಿರುವ ವಿವೋ T3 ಅಲ್ಟ್ರಾ (Vivo T3 Ultra) ಫೋನ್ ಮೀಡ್‌ರೇಂಜ್ ದರದ ಹಾಗೂ ಸ್ಟೈಲಿಶ್ ಲುಕ್ ಮೂಲಕ ಆಕರ್ಷಕ ಎನಿಸಿದೆ. ಈ ಮೊಬೈಲ್‌ನ ಫಸ್ಟ್ ಸೇಲ್ ಇಂದು ( ಸೆಪ್ಟೆಂಬರ್ 19 ರಂದು ) ಸಂಜೆ 7 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಪ್ರಾರಂಭ ಆಗಲಿದೆ. ಅಂದಹಾಗೆ ವಿವೋ T3 ಅಲ್ಟ್ರಾ ಮೊಬೈಲ್‌ನ ಆರಂಭಿಕ ವೇರಿಯಂಟ್ (8GB+128GB) ಬೆಲೆಯು 31,999ರೂ. ಗಳು ಆಗಿದ್ದು, ಕೆಲವು ಆಫರ್ ಸಹ ಲಭ್ಯ ಆಗಲಿವೆ.
ಹೌದು, ರಿಯಲ್‌ಮಿ ಕಂಪನಿಯ ವಿವೋ T3 ಅಲ್ಟ್ರಾ (Vivo T3 Ultra) ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಇಂದು ಅಧಿಕೃತವಾಗಿ ಮಾರಾಟ ಪ್ರಾರಂಭ ಮಾಡಲಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ.

ಇನ್ನು ಈ ಮೊಬೈಲ್ 5,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದರ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಲೂನಾರ್ ಗ್ರೇ ಮತ್ತು ಫಾರೆಸ್ಟ್ ಗ್ರೀನ್ ಕಲರ್ ಆಯ್ಕೆಯಲ್ಲಿ ಈ ಫೋನ್ ಖರೀದಿಗೆ ಲಭ್ಯ ಆಗಲಿದೆ. ಇನ್ನುಳಿದಂತೆ ವಿವೋ T3 ಅಲ್ಟ್ರಾ (Vivo T3 Ultra) ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ವಿವೋ T3 ಅಲ್ಟ್ರಾ - ಫೀಚರ್ಸ್
ವಿವೋ T3 ಅಲ್ಟ್ರಾ ಮೊಬೈಲ್ 6.78 ಇಂಚಿನ 3D ಕರ್ವ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2800 x 1260 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಮಾಡುತ್ತದೆ.
ವಿವೋ T3 ಅಲ್ಟ್ರಾ ಫೋನ್ 8GB+128GB, 8GB+256GB ಹಾಗೂ 12GB+256GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಒಳಗೊಂಡಿದೆ.
ವಿವೋ T3 ಅಲ್ಟ್ರಾ ಮೊಬೈಲ್ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.
ಬೆಲೆ ಹಾಗೂ ಲಭ್ಯತೆ
8GB+128GB ವೇರಿಯಂಟ್ ಬೆಲೆ 31,999ರೂ
8GB+256GB ವೇರಿಯಂಟ್ ಬೆಲೆ 33,999ರೂ
12GB+256GB ವೇರಿಯಂಟ್ ಬೆಲೆ 35,999ರೂ


Click it and Unblock the Notifications








