ಜನಪ್ರಿಯ ವಿವೋ (Vivo) ಮೊಬೈಲ್ ಸಂಸ್ಥೆಯ ನೂತನ ವಿವೋ T3 ಅಲ್ಟ್ರಾ (Vivo T3 Ultra) ಮೊಬೈಲ್ ಆಕರ್ಷಕ ಫೀಚರ್ಸ್ ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಸ್ಮಾರ್ಟ್ ಫೋನ್ ಇಂದು (ಸೆಪ್ಟೆಂಬರ್ 26 ರಂದು) ಫ್ಲಿಪ್ ಕಾರ್ಟ್ (flipkart) ವೆಬ್ ಸೈಟ್ ಮೂಲಕ ಮತ್ತೆ ಸೇಲ್ ಶುರು ಮಾಡಲಿದೆ. ಇನ್ನು ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸಾಮರ್ಥ್ಯದಲ್ಲಿ ಇದೆ. ಹೌದು, ವಿವೋ ಕಂಪನಿಯ ವಿವೋ T3 ಅಲ್ಟ್ರಾ (Vivo T3 Ultra) ಫೋನ್ ಇಂದು ಫ್ಲಿಪ್ ಕಾರ್ಟ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯ ಇದೆ. ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಚಿಪ್ ಸೆಟ್ ಪ್ರೊಸೆಸರ್ ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ನಲ್ಲಿ ಕೆಲಸ ಮಾಡಲಿದೆ. ಇನ್ನು ಈ ಮೊಬೈಲ್ ನ ಆರಂಭಿಕ ದರವು 31,999ರೂ. ಗಳು ಆಗಿದೆ. ಹಾಗೆಯೇ ವಿವೋ T3 ಅಲ್ಟ್ರಾ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಈ ಮೊಬೈಲ್ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸೌಲಭ್ಯವನ್ನು ಪಡೆದಿದೆ. ಇನ್ನುಳಿದಂತೆ ವಿವೋ T3 ಅಲ್ಟ್ರಾ (Vivo T3 Ultra) ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ. ವಿವೋ T3 ಅಲ್ಟ್ರಾ ಫೋನ್ - ಫೀಚರ್ಸ್ ವಿವೋ T3 ಅಲ್ಟ್ರಾ ಸ್ಮಾರ್ಟ್ ಫೋನ್ 6.78 ಇಂಚಿನ 3D ಕರ್ವ್ ಹೆಚ್ ಡಿ+ ಅಮೋಲೆಡ್ ಡಿಸ್ ಪ್ಲೇ ಅನ್ನು ಹೊಂದಿದ್ದು, ಇದು 2800 x 1260 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9200+ SoC ಚಿಪ್ ಸೆಟ್ ಪ್ರೊಸೆಸರ್ ಪವರ್ ನಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಪಡೆದಿದೆ. ವಿವೋ T3 ಅಲ್ಟ್ರಾ ಸ್ಮಾರ್ಟ್ ಫೋನ್ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದರ ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಒಳಗೊಂಡಿದೆ. ವಿವೋ T3 ಅಲ್ಟ್ರಾ ಸ್ಮಾರ್ಟ್ ಫೋನ್ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್ , ಯುಎಸ್ ಬಿ ಟೈಪ್-ಸಿ, ಸೈಡ್ ಮೌಂಟ್ ಫಿಂಗರ್ ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ. ಸ್ಟೋರೇಜ್ ಹಾಗೂ ಕಲರ್ ಆಯ್ಕೆವಿವೋ T3 ಅಲ್ಟ್ರಾ ಸ್ಮಾರ್ಟ್ ಫೋನ್ 8GB + 128GB ವೇರಿಯಂಟ್ , 8GB + 256GB ವೇರಿಯಂಟ್ ಹಾಗೂ 12GB + 256GB ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಗ್ರಾಹಕರು ಈ ಫೋನ್ ಗ್ರೀನ್ ಹಾಗೂ ಗ್ರೇ ಕಲರ್ ಆಯ್ಕೆಯಲ್ಲಿ ಖರೀದಿ ಮಾಡಬಹುದು.