Home
ಸುದ್ದಿಜಾಲ

ನಾಳೆ ಮತ್ತೆ Vivo T3 Ultra ಫೋನ್‌ ಸೇಲ್‌; ಸಿಗುತ್ತೆ ಈ ಬೊಂಬಾಟ್‌ ಆಫರ್‌!

ವಿವೋ (Vivo) ಕಂಪನಿಯು ಇತ್ತೀಚಿಗೆ ಹೊಸದಾಗಿ ಭಾರತದಲ್ಲಿ ಬಿಡುಗಡೆ ಮಾಡಿರುವ ವಿವೋ T3 ಅಲ್ಟ್ರಾ (Vivo T3 Ultra) ಮೊಬೈಲ್‌ ಈಗಾಗಲೇ ಬೆಲೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಮೋಡಿ ಮಾಡಿದೆ. ಈ ಮೊಬೈಲ್‌ ನಾಳೆ (ಸೆಪ್ಟೆಂಬರ್ 26 ರಂದು) ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಫೋನಿನ ಆರಂಭಿಕ ಕೊಡುಗೆಯ ಬೆಲೆ 31,999ರೂ. ಆಗಿದೆ. ಇನ್ನು ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಆಗಿದೆ.

ಹೌದು, ಜನಪ್ರಿಯ ವಿವೋ ಸಂಸ್ಥೆಯ ವಿವೋ T3 ಅಲ್ಟ್ರಾ (Vivo T3 Ultra) ಮೊಬೈಲ್‌ ಇದೇ ಸೆಪ್ಟೆಂಬರ್ 26 ರಂದು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಅಂದಹಾಗೆ ಮೀಡ್‌ರೇಂಜ್‌ ಪ್ರೈಟ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುವ ಈ ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿದ್ದು, ಜೊತೆಗೆ ಮೂರು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ.

ನಾಳೆ ಮತ್ತೆ Vivo T3 Ultra ಫೋನ್‌ ಸೇಲ್‌; ಸಿಗುತ್ತೆ ಈ ಬೊಂಬಾಟ್‌ ಆಫರ್‌!

ಹಾಗೆಯೇ ವಿವೋ T3 ಅಲ್ಟ್ರಾ ಮೊಬೈಲ್‌ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಒಳಗೊಂಡಿದೆ. ಅಲ್ಲದೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9200+ SoC ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗಾದರೇ ವಿವೋ T3 ಅಲ್ಟ್ರಾ (Vivo T3 Ultra) ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T3 ಅಲ್ಟ್ರಾ ಫೋನ್‌ - ಫೀಚರ್ಸ್‌

ವಿವೋ T3 ಅಲ್ಟ್ರಾ ಮೊಬೈಲ್‌ 6.78 ಇಂಚಿನ 3D ಕರ್ವ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 2800 x 1260 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್‌ ಆಯ್ಕೆ ಒಳಗೊಂಡಿದ್ದು, ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದು ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್ ಸಹ ಪಡೆದಿದೆ.

ವಿವೋ T3 ಅಲ್ಟ್ರಾ ಫೋನ್‌ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಮೊಬೈಲ್‌ನ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಸೌಲಭ್ಯ ಪಡೆದಿದೆ.

ವಿವೋ T3 ಅಲ್ಟ್ರಾ ಫೋನಿನ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ ಫೈ 6, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಒಳಗೊಂಡಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ
ವಿವೋ T3 ಅಲ್ಟ್ರಾ ಫೋನ್‌ 8GB + 128GB ವೇರಿಯಂಟ್‌, 8GB + 256GB ವೇರಿಯಂಟ್‌ ಹಾಗೂ 12GB + 256GB ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಗ್ರಾಹಕರು ಈ ಫೋನ್‌ ಗ್ರೀನ್‌ ಹಾಗೂ ಗ್ರೇ ಕಲರ್‌ ಆಯ್ಕೆಯಲ್ಲಿ ಖರೀದಿ ಮಾಡಬಹುದು.

Best Mobiles in India

English summary
VIVO T3 Ultra goes on sale in India Tomorrow via flipkart website. Check out Price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+