ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
ವಿವೋ ಸಂಸ್ಥೆಯ ಇತ್ತೀಚಿಗೆ ಲಾಂಚ್ ಮಾಡಿರುವ ವಿವೋ T3x 5G (vivo T3X 5G) ಸ್ಮಾರ್ಟ್‌ಫೋನ್ ಮೊದಲ ಮಾರಾಟ ನಾಳೆ (ಏಪ್ರಿಲ್ 24 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಪ್ರಾರಂಭ ಆಗಲಿದೆ. ಈ ಫೋನ್ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್ ಸೌಲಭ್ಯವನ್ನು ಪಡೆದುಕೊಂಡಿದೆ.
ವಿವೋ ಕಂಪನಿಯ ವಿವೋ T3x 5G ಮೊಬೈಲ್ ನಾಳೆ ಅಧಿಕೃತವಾಗಿ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮಾರಾಟ ಆರಂಭ ಮಾಡಲಿದೆ. ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯದಲ್ಲಿ ಇದೆ.

ವಿವೋ T3x 5G ಮೊಬೈಲ್ 4GB + 128GB, 6GB + 128 GB ಹಾಗೂ 8GB + 128 GB ಸ್ಟೋರೇಜ್ ವೇರಿಯಂಟ್ ಮಾಡೆಲ್‌ಗಳ ಆಯ್ಕೆ ಪಡೆದಿದೆ. ಅಲ್ಲದೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದರ ಆರಂಭಿಕ ಬೆಲೆಯು 13,499ರೂ. ಗಳು ಆಗಿದೆ. ಹಾಗಾದರೇ ವಿವೋ T3x 5G ಮೊಬೈಲ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ವಿವೋ T3x 5G ಮೊಬೈಲ್ ಫೀಚರ್ಸ್
ವಿವೋ ಸಂಸ್ಥೆಯ ಈ ಸ್ಮಾರ್ಟ್‌ಫೋನ್ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಇದು ಫುಲ್ ಹೆಚ್‌ಡಿ + 2408 - 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇ ಆಗಿದ್ದು, 1000 ನಿಟ್ಸ್ HBM ಬ್ರೈಟ್‌ನೆಸ್ ಆಯ್ಕೆ ಇದ್ದು, 339 ppi ಪಿಕ್ಸೆಲ್ ಸಾಂದ್ರತೆ ಪಡೆದಿದೆ.
ವಿವೋ T3x 5G ಫೋನ್ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, ಅಡ್ರಿನೋ 710 ಜಿಪಿಯುನಿಂದ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಂಡ್ರಾಯ್ಡ್ 14 ಅನ್ನು ಆಧರಿಸಿದ ಫನ್‌ಟಚ್ ಓಎಸ್ 14 ಅನ್ನು ಕೆಲಸ ನಿರ್ವಹಿಸಲಿದೆ. ಅದೇ ರೀತೀ ಈ ಮೊಬೈಲ್ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್‌ನಲ್ಲಿ ಖರೀದಿಗೆ ಇದೆ.
ವಿವೋ T3x 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್‌ನಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ ಇದು 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಹೊಂದಿದೆ.
ವಿವೋ T3x 5G ಮೊಬೈಲ್ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, 44W ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್ ಇದೆ. ಇನ್ನು ಈ ಫೋನ್ 199 ಗ್ರಾಂ ತೂಕ ಹೊಂದಿದೆ. ವಿವೋ T3x 5G ಮೊಬೈಲ್‌ನ ಆರಂಭಿಕ 4GB RAM ವೇರಿಯಂಟ್ ಬೆಲೆ 13,499ರೂ. ಗಳು ಆಗಿದೆ.
ವಿವೋ T3x 5G ಮೊಬೈಲ್ 4GB + 128 GB, 6GB + 128 GB ಹಾಗೂ 8GB + 128 GB ಸ್ಟೋರೇಜ್ ವೇರಿಯಂಟ್ ಮಾಡೆಲ್‌ಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಕ್ರಿಮ್‌ಸ್ನ್ ಬ್ಲಿಸ್ ಹಾಗೂ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ.


Click it and Unblock the Notifications








