ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ವಿವೋ ಕಂಪನಿಯು ವಿವೋ T3x 5G (vivo T3X 5G) ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಇದು ತನ್ನ ವರ್ಗದಲ್ಲೇ ಗ್ರಾಹಕರನ್ನ ಆಕರ್ಷಿಸಿದೆ. ಈ ಮೊಬೈಲ್‌ನ ಮುಂದಿನ ಸೇಲ್ ಇದೇ ಮೇ 1 ರಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಶುರು ವಾಗಲಿದೆ.
ಹೌದು, ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಇದೇ ಮೇ 1 ರಂದು ಮಧ್ಯಾಹ್ನ 12 ಗಂಟೆಗೆ ವಿವೋ ಸಂಸ್ಥೆಯ ವಿವೋ T3x 5G ಫೋನ್ ಮಾರಾಟ ಪ್ರಾರಂಭ ಆಗಲಿದೆ. ಈ ಫೋನ್ 12GB + 256GB ಸ್ಟೋರೇಜ್ ವೇರಿಯಂಟ್ ಪಡೆದಿದ್ದು, ಹೈಲೈಟ್ ಆಗಿ ಕಾಣಿಸಿಕೊಂಡಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ.

ಹಾಗೆಯೇ ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯದಲ್ಲಿ ಪಡೆದಿದೆ. ಇದರ ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಹೊಂದಿರುವುದು ಮತ್ತೊಂದು ಹೈಲೈಟ್ ಅಂಶ ಎನಿಸಿದೆ. ಇನ್ನುಳಿದಂತೆ ವಿವೋ T3x 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ T3x 5G ಫೋನ್ - ಫೀಚರ್ಸ್
ವಿವೋ ಕಂಪನಿಯ ವಿವೋ T3x 5G ಮೊಬೈಲ್ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್ ಆಯ್ಕೆ ಹೊಂದಿದೆ. ಇದು ಫುಲ್ ಹೆಚ್‌ಡಿ + 2408 - 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇ ಆಗಿದ್ದು, 1000 ನಿಟ್ಸ್ HBM ಬ್ರೈಟ್‌ನೆಸ್ ಆಯ್ಕೆ ಇದ್ದು, 339 ppi ಪಿಕ್ಸೆಲ್ ಸಾಂದ್ರತೆ ಪಡೆದಿದೆ.
ವಿವೋ T3x 5G ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಪಡೆದಿದ್ದು, ಅಡ್ರಿನೋ 710 ಜಿಪಿಯುನಿಂದ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಂಡ್ರಾಯ್ಡ್ 14 ಅನ್ನು ಆಧರಿಸಿದ ಫನ್‌ಟಚ್ ಓಎಸ್ 14 ಅನ್ನು ಕಾರ್ಯ ನಿರ್ವಹಿಸಲಿದೆ. ಅದೇ ರೀತೀ ಈ ಮೊಬೈಲ್ 4GB + 128GB ಆಯ್ಕೆ, 6GB + 128GB ಆಯ್ಕೆ ಹಾಗೂ 8GB + 128GB ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.
ವಿವೋ ಕಂಪನಿಯ ಈ ಹೊಸ ಬಜೆಟ್ ದರದ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್‌ನಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ ಇದು 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಹೊಂದಿದೆ.
ವಿವೋ ಸಂಸ್ಥೆಯ ಈ 5G ಫೋನ್ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, ಇದರ ಜೊತೆಗೆ 44W ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್ ಇದೆ. ಇನ್ನು ಈ ಫೋನ್ 199 ಗ್ರಾಂ ತೂಕ ಪಡೆದಿದೆ. ವಿವೋ T3x 5G ಮೊಬೈಲ್‌ನ ಆರಂಭಿಕ 4GB RAM ವೇರಿಯಂಟ್ ಬೆಲೆ 13,499ರೂ. ಗಳು ಆಗಿದೆ.
ವಿವೋ T3x 5G ಮೊಬೈಲ್ 4GB + 128 GB, 6GB + 128 GB ಮತ್ತು 8GB + 128 GB ಸ್ಟೋರೇಜ್ ವೇರಿಯಂಟ್ ಮಾಡೆಲ್‌ಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇರಲಿದೆ. ಇನ್ನು ಇದನ್ನು ಕ್ರಿಮ್‌ಸ್ನ್ ಬ್ಲಿಸ್ ಹಾಗೂ ಗ್ರೀನ್ ಕಲರ್ ಆಯ್ಕೆಯಲ್ಲಿ ಗ್ರಾಹಕರು ಖರೀದಿ ಮಾಡಬಹುದು.


Click it and Unblock the Notifications








