Home
ಸುದ್ದಿಜಾಲ

ನೂತನ Vivo ಮೊಬೈಲ್‌ ಖರೀದಿಗೆ ಇದು ಸಕಾಲ; 12,000ರೂ. ಒಳಗೆ ಲಭ್ಯ!

ಪ್ರಸ್ತುತ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಈಗ ಬಿಗ್‌ ಬಿಲಿಯನ್‌ ಡೇಸ್‌ 2024 (Flipkart Big Billion Days Sale 2024) ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಇನ್ನು ಮೊಬೈಲ್ ಖರೀದಿಸುವ ಗ್ರಾಹಕರು ಲಭ್ಯ ಇರುವ ಬ್ಯಾಂಕ್‌ ಆಫರ್‌ಗಳನ್ನು ಪಡೆದುಕೊಂಡರೆ, ಮತ್ತಷ್ಟು ಡಿಸ್ಕೌಂಟ್‌ ಖಚಿತ. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T3x 5G (vivo T3x 5G) ಫೋನ್‌ ಬೊಂಬಾಟ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ನಲ್ಲಿ ವಿವೋ T3x 5G (vivo T3x 5G) ಮೊಬೈಲ್ ಶೇ. 25% ರಷ್ಟು ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 12,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರ ಜೊತೆಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಆಫರ್‌ ಸಹ ಲಭ್ಯವಾಗಲಿವೆ.

ನೂತನ Vivo ಮೊಬೈಲ್‌ ಖರೀದಿಗೆ ಇದು ಸಕಾಲ; 12,000ರೂ. ಒಳಗೆ ಲಭ್ಯ!

ವಿವೋ T3x 5G (vivo T3x 5G) ಫೋನ್‌ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ ಮುಂದೆ ನೋಡೋಣ ಬನ್ನಿರಿ.

ವಿವೋ T3x 5G - ಫೀಚರ್ಸ್‌

ವಿವೋ T3x 5G ಮೊಬೈಲ್‌ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿದೆ. ಇದು ಫುಲ್‌ ಹೆಚ್‌ಡಿ + 2408 - 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇ ಆಗಿದ್ದು, 1000 ನಿಟ್ಸ್‌ HBM ಬ್ರೈಟ್‌ನೆಸ್‌ ಆಯ್ಕೆ ಇದ್ದು, 339 ppi ಪಿಕ್ಸೆಲ್ ಸಾಂದ್ರತೆ ಮತ್ತು 83 ಪ್ರತಿಶತ NTSC ಬಣ್ಣದ ಹರವು ಪಡೆದಿದೆ.

ವಿವೋ T3x 5G ಮೊಬೈಲ್‌ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಅಡ್ರಿನೋ 710 ಜಿಪಿಯುನಿಂದ ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಆಂಡ್ರಾಯ್ಡ್‌ 14 ಅನ್ನು ಆಧರಿಸಿದ ಫನ್‌ಟಚ್‌ ಓಎಸ್‌ 14 ಅನ್ನು ಕೆಲಸ ಮಾಡಲಿದೆ. ಹಾಗೆಯೇ ಈ ಫೋನ್ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್‌ನಲ್ಲಿ ಲಭ್ಯ ಇದೆ.

ವಿವೋ T3x 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್‌ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸರ್‌ನಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ ಇದು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಪಡೆದುಕೊಂಡಿದೆ.

ವಿವೋ T3x 5G ಮೊಬೈಲ್‌ ಇನ್ನು ಈ ಫೋನ್ 199 ಗ್ರಾಂ ತೂಕ ಹೊಂದಿದ್ದು, 165.70 - 76.0 - 7.99mm ಅನುಪಾತವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪ್ರಯೋಜನ ಸಹ ಪಡೆದಿದ್ದು, ಇದರ ಜೊತೆಗೆ 44W ಫ್ಲ್ಯಾಶ್‌ ಚಾರ್ಜ್ ಅನ್ನು ಸಪೋರ್ಟ್‌ ಇದೆ.

Best Mobiles in India

English summary
vivo T3x 5G Received attractive discount on on Flipkart Big Billion Days Sale 2024. check full details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+