Home
ಸುದ್ದಿಜಾಲ

Vivo: ಭಾರತದಲ್ಲಿ ವಿವೋ T3x 5G ಸ್ಮಾರ್ಟ್‌ಫೋನ್ ಲಾಂಚ್‌! ಫೀಚರ್ಸ್‌ ಏನು?, ಬೆಲೆ ಎಷ್ಟು?

ಭಾರತದಲ್ಲಿ ವಿವೋ ಸ್ಮಾರ್ಟ್‌ಫೋನ್‌ಗಳು (Vivo smartphone) ವಿಶೇಷ ಬೇಡಿಕೆ ಪಡೆದುಕೊಂಡಿವೆ. ಈ ನಡುವೆ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ ಆಗಿರುವ ವಿವೋ T3x 5G ಸ್ಮಾರ್ಟ್‌ಫೋನ್‌ (Vivo T3x 5G smartphone) ಅನ್ನು ಲಾಂಚ್‌ ಮಾಡಲಾಗಿದ್ದು, ಈ ಫೋನ್ ಆಫರ್ ಬೆಲೆಯಲ್ಲಿ ಲಭ್ಯ ಇದೆ.

ಹೌದು, ಭಾರತದಲ್ಲಿ ವಿವೋ T3x 5G ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಅನಾವರಣ ಆಗುವ ಮುನ್ನವೇ ದೊಡ್ಡ ಮಟ್ಟದಲ್ಲಿ ಸೌಂಡ್‌ ಮಾಡುತ್ತಿತ್ತು. ಈ ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯ ಇರಲಿದ್ದು, ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಆಫರ್ ಬೆಲೆ ವಿವರ ಇಲ್ಲಿದೆ ನೋಡಿ.

ಭಾರತದಲ್ಲಿ ವಿವೋ T3x 5G ಸ್ಮಾರ್ಟ್‌ಫೋನ್ ಲಾಂಚ್‌! ಫೀಚರ್ಸ್‌ ಏನು?, ಬೆಲೆ ಎಷ್ಟು?

ವಿವೋ T3x 5G ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.72 ಇಂಚಿನ ಡಿಸ್‌ಪ್ಲೇಯೊಂದಿಗೆ 120 Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿದೆ. ಇದು ಫುಲ್‌ ಹೆಚ್‌ಡಿ + 2408 - 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇ ಆಗಿದ್ದು, 1000 ನಿಟ್ಸ್‌ HBM ಬ್ರೈಟ್‌ನೆಸ್‌ ಆಯ್ಕೆ, 339 ppi ಪಿಕ್ಸೆಲ್ ಸಾಂದ್ರತೆ ಮತ್ತು 83 ಪ್ರತಿಶತ NTSC ಬಣ್ಣದ ಹರವುಗಳೊಂದಿಗೆ ಬರುತ್ತದೆ.

ವಿವೋ T3x 5G ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ವಿವರ: ಈ ಫೋನ್ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಅಡ್ರಿನೋ 710 ಜಿಪಿಯುನಿಂದ ಬಲ ಪಡೆದುಕೊಂಡಿದೆ. ಹಾಗೆಯೇ ಈ ವಿಶೇಷ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 14 ಅನ್ನು ಆಧರಿಸಿದ ಫನ್‌ಟಚ್‌ ಓಎಸ್‌ 14 ಅನ್ನು ರನ್‌ ಮಾಡಲಿದೆ. ಉಳಿದಂತೆ ಈ ಫೋನ್ 4GB RAM, 6GB RAM ಮತ್ತು 8GB RAM ಆಯ್ಕೆಯ ವೇರಿಯಂಟ್‌ನಲ್ಲಿ ಲಭ್ಯ ಇದ್ದು, ಇದೆಲ್ಲದರಲ್ಲೂ 128GB ಇಂಟರ್‌ ಸ್ಟೋರೇಜ್‌ ಹೊಂದಿದೆ.

ವಿವೋ T3x 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸರ್‌ನೊಂದಿಗೆ f/1.8 ದ್ಯುತಿರಂಧ್ರ, 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸರ್‌ನೊಂದಿಗೆ f/2.4 ದ್ಯುತಿರಂಧ್ರದೊಂದಿಗೆ ಕಾಣಿಸಿಕೊಂಡಿದ್ದು, ಹಾಗೆಯೇ f/2.05 ದ್ಯುತಿರಂಧ್ರದೊಂದಿಗೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ.

ಭಾರತದಲ್ಲಿ ವಿವೋ T3x 5G ಸ್ಮಾರ್ಟ್‌ಫೋನ್ ಲಾಂಚ್‌! ಫೀಚರ್ಸ್‌ ಏನು?, ಬೆಲೆ ಎಷ್ಟು?

ವಿವೋ T3x 5G ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 44W ಫ್ಲ್ಯಾಶ್‌ ಚಾರ್ಜ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಬಳಕೆದಾರರನ್ನು ದಿನವಿಡೀ ಸಂಪರ್ಕದಲ್ಲಿರಿಸಲು ಅನುಕೂಲ ಆಗಲಿದ್ದು, ವಿಸ್ತೃತ ಸ್ಟ್ಯಾಂಡ್‌ಬೈ ಸಮಯಕ್ಕಾಗಿ ಸೂಪರ್ ಬ್ಯಾಟರಿ ಸೇವರ್ ಮೋಡ್‌ ಅನ್ನೂ ಸಹ ಹೊಂದಿದೆ. ಬೆಂಬಲಿತವಾಗಿದೆ. ಇನ್ನು ಈ ಫೋನ್ 199 ಗ್ರಾಂ ತೂಕ ಹೊಂದಿದ್ದು, 165.70 - 76.0 - 7.99mm ಆಯಾಮಗಳನ್ನು ಹೊಂದಿದೆ.

ವಿವೋT3x 5G ಬೆಲೆ ಮತ್ತು ಲಭ್ಯತೆ: ಈ ಸ್ಮಾರ್ಟ್‌ಫೋನ್‌ನ 4GB RAM ವೇರಿಯಂಟ್‌ 17,499ರೂ. ಗಳಾಗಿದ್ದು, ವಿಶೇಷ ಬೆಲೆ 13,499ರೂ.ಗಳಿಗೆ ಇದನ್ನು ಖರೀದಿ ಮಾಡಬಹುದಾಗಿದೆ. ಹಾಗೆಯೇ ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಕೆದಾರರು, ಎಸ್‌ಬಿಐ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಕೆದಾರರು ಹೆಚ್ಚುವರಿಯಾಗಿ 1,000ರೂ.ಗಳ ರಿಯಾಯಿತಿ ಪಡೆಯಬಹುದಾಗಿದೆ. ಈ ಮೂಲಕ 12,499ರೂ.ಗಳಿಗೆ ಈ ಫೋನ್‌ ಖರೀದಿ ಮಾಡಬಹುದಾಗಿದೆ.

ಭಾರತದಲ್ಲಿ ವಿವೋ T3x 5G ಸ್ಮಾರ್ಟ್‌ಫೋನ್ ಲಾಂಚ್‌! ಫೀಚರ್ಸ್‌ ಏನು?, ಬೆಲೆ ಎಷ್ಟು?

ಜೊತೆಗೆ 6GB RAM ಮತ್ತು 8GB RAM ವೇರಿಯಂಟ್‌ಗಳು ಕ್ರಮವಾಗಿ 14,999 ರೂ.ಗಳು ಹಾಗೂ 16,499 ರೂ.ಗಳ ವಿಶೇಷ ಬೆಲೆಗಳಲ್ಲಿ ಲಭ್ಯ ಇದೆ. ಮೇಲೆ ಇರುವ ಬ್ಯಾಂಕ್ ಕೊಡುಗೆಗಳು ಇಲ್ಲಿಯೂ ಮಾನ್ಯವಾಗಿರುತ್ತವೆ. ಏಪ್ರಿಲ್ 24, 2024 ರಂದು ಮಧ್ಯಾಹ್ನದಿಂದ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌, ವಿವೋ ಇಂಡಿಯಾ ಇ-ಸ್ಟೋರ್ ಮತ್ತು ಎಲ್ಲಾ ಪಾಲುದಾರ ರಿಟೇಲರ್ ಸ್ಟೋರ್‌ಗಳಲ್ಲಿ ಖರೀದಿ ಆಗಲಿದೆ. ಈ ಫೋನ್‌ ಕ್ರಿಸ್ಟಲ್ ಗ್ರೀನ್ ಮತ್ತು ಕ್ರಿಮ್ಸನ್ ಬ್ಲಿಸ್ ಎಂಬ ಎರಡು ಬಣ್ಣದ ಆಯ್ಕೆಯಲ್ಲಿ ಲಭ್ಯ ಇದೆ.

Best Mobiles in India

English summary
Vivo T3x 5G smartphone unveiled in India. This smartphone was sounding great even before its unveiling. This phone will be available at a budget price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+