Home
ಸುದ್ದಿಜಾಲ

ಇಂದು ಭಾರತದಲ್ಲಿ Vivo T4 5G ಲಾಂಚ್; 7300mAh ಬ್ಯಾಟರಿ ಖಚಿತ.. ಬೆಲೆಯೂ ಬಹಿರಂಗ! ಇಲ್ಲಿವೆ ಫೀಚರ್ಸ್

ದಿ ವೇಟ್ ಈಸ್ ಓವರ್..! ಬಹುನಿರೀಕ್ಷಿತ ವಿವೋ T4 5G (Vivo T4 5G) ಸ್ಮಾರ್ಟ್‌ಫೋನ್ ಇಂದು (ಏಪ್ರಿಲ್ 21) ಭಾರತದಲ್ಲಿ ಬಿಡುಗಡೆಯಾಗಲಿದೆ. ವಿವೋ ಕಂಪನಿಯು, ಬಿಡುಗಡೆಗೂ ಮುನ್ನ, ಪ್ರೊಸೆಸರ್ ಸಾಮರ್ಥ್ಯ, ಬ್ಯಾಟರಿ ಬ್ಯಾಕಪ್, ಸೂಪರ್ ಫಾಸ್ಟ್ ಚಾರ್ಜಿಂಗ್ ಸೇರಿದಂತೆ ನೂತನ ಫೋನಿನ ಕೆಲವು ಪ್ರಮುಖ ವಿಶೇಷತೆಗಳನ್ನು ಬಹಿರಂಗಪಡಿಸಿದೆ. ಈ ವಿವೋ T4 ಮೊಬೈಲ್‌ 7,300mAh ಬ್ಯಾಟರಿಯೊಂದಿಗೆ ಬರಲಿದೆ ಎಂದು ಕಂಪನಿ ದೃಢಪಡಿಸಿದೆ. ಬನ್ನಿ, ಈ ಫೋನಿನ ಬಿಡುಗಡೆ ವಿವರಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.

ವಿವೋ T4 5G ಅತ್ಯಂತ ತೆಳುವಾದ ಫೋನ್ ಆಗಿದೆ. ಕಂಪನಿಯು ಯುವಜನತೆಯನ್ನು ಗಮನದಲ್ಲಿಟ್ಟುಕೊಂಡು ಈ 5G ಫೋನನ್ನು ಬಿಡುಗಡೆ ಮಾಡುತ್ತಿದೆ. ಈ ಮೊಬೈಲ್ ಎಐ ವೈಶಿಷ್ಟ್ಯದೊಂದಿಗೆ ಬರುತ್ತದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 12GB RAM + 256GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಲಿದೆ.

ಇಂದು Vivo T4 5G ಲಾಂಚ್; 7300mAh ಬ್ಯಾಟರಿ.. ಬೆಲೆಯೂ ಬಹಿರಂಗ! ಫೀಚರ್ಸ್ ನೋಡಿ

ವಿವೋ T4 5G ಬೆಲೆ ಮತ್ತು ಬಿಡುಗಡೆ ವಿವರ

ವಿವೋ T4 5G ಮೊಬೈಲ್ ಇಂದು (ಏಪ್ರಿಲ್ 22) ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಕಂಪನಿಯು ವರ್ಚುವಲ್ ಕಾರ್ಯಕ್ರಮದ ಮೂಲಕ ಈ ಫೋನನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲಿದೆ. ಈ ಲಾಂಚ್ ಈವೆಂಟ್ ಅದನ್ನು ಕಂಪನಿಯ (Vivo) ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಗೂ ಎಲ್ಲಾ ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಲೈವ್ ವೀಕ್ಷಿಸಬಹುದು. ಈ ಕಾರ್ಯಕ್ರಮದಲ್ಲಿ ವಿವೋ T4 ಫೋನಿನ ಬೆಲೆ ಮತ್ತು ಮಾರಾಟದ ವಿವರಗಳನ್ನು ಬಹಿರಂಗಪಡಿಸಲಾಗುವುದು.

ಭಾರತದಲ್ಲಿ ವಿವೋ T4 5G ಫೋನಿನ ಬೆಲೆ 25,000 ರೂ.ಗಳಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ. ವಿಶೇಷವೆಂದರೆ, ವಿವೋ T4 5G ಮೊಬೈಲ್ ಈ ತಿಂಗಳ ಆರಂಭದಲ್ಲಿ ಬಿಡುಗಡೆಯಾದ ಐಕ್ಯೂ Z10 5G (iQOO Z10 5G) ಫೋನಿನ ಮರುಬ್ರಾಂಡೆಡ್ ಆವೃತ್ತಿಯಾಗಿ ಬರುವ ಸಾಧ್ಯತೆಯಿದೆ. ಮುಂಬರುವ ವಿವೋ T4 5G ಮೊಬೈಲ್‌ನ ​​ಹಲವು ಪ್ರಮುಖ ವೈಶಿಷ್ಟ್ಯಗಳನ್ನು ವಿವೋ ಖಚಿತಪಡಿಸಿದ್ದು, ಅವುಗಳನ್ನು ಈ ಕೆಳಗಿನಂತೆ ತಿಳಿಯಬಹುದು.

ವಿವೋ T4 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ T4 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಕ್ವಾಡ್ ಕರ್ವ್ಡ್ ಅಮೋಲೆಡ್ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 5000 ನಿಟ್ಸ್ ಬ್ರೈಟ್‌ನೆಸ್ ಪಡೆದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ T4 5G ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 7s ಜೆನ್ 3 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾಗಿದೆ. ಈ ಮೊಬೈಲ್ 820K+ AnTuTu ಬೆಂಚ್‌ಮಾರ್ಕ್ ಸ್ಕೋರ್ ಪಡೆದಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ Funtouch OS 15 ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ 8GB RAM ಮತ್ತು 12GB RAM ಹೊಂದಿದೆ. ಇದು ಒಟ್ಟು ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇದು 8GB RAM + 128GB, 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ.

ಇಂದು Vivo T4 5G ಲಾಂಚ್; 7300mAh ಬ್ಯಾಟರಿ.. ಬೆಲೆಯೂ ಬಹಿರಂಗ! ಫೀಚರ್ಸ್ ನೋಡಿ

ಕ್ಯಾಮೆರಾ ಸೆಟಪ್

ವಿವೋ T4 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು OIS ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಮೊದಲೇ ಹೇಳಿದಂತೆ ವಿವೋ T4 5G ಸ್ಮಾರ್ಟ್‌ಫೋನ್ 7,300mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, ಈ ಫೋನಿನಲ್ಲಿ 90W ವೇಗದ ಚಾರ್ಜಿಂಗ್ ತಂತ್ರಜ್ಞಾನ ಲಭ್ಯವಿದೆ. ಈ ಮೊಬೈಲ್‌ನ ದಪ್ಪ ಕೇವಲ 0.789 ಸೆಂ.ಮೀ ಆಗಿದೆ. ಕಂಪನಿಯು ಈ ಫೋನನ್ನು 7,300mAh ಬ್ಯಾಟರಿಯನ್ನು ಹೊಂದಿರುವ ಅತ್ಯಂತ ತೆಳುವಾದ ಸ್ಮಾರ್ಟ್‌ಫೋನ್ ಎಂದು ಹೇಳಿದೆ.

ಇತರೆ ವೈಶಿಷ್ಟ್ಯಗಳು

ವಿವೋ T4 5G ಫೋನ್ ಹಲವು ಎಐ (AI) ವೈಶಿಷ್ಟ್ಯ ಹೊಂದಿದೆ. ಇದು ಫೋಟೋಗಳನ್ನು ಇನ್ನಷ್ಟು ಉತ್ತಮವಾಗಿ ಕಾಣುವಂತೆ ಮಾಡಲು ಕ್ಯಾಮೆರಾಕ್ಕಾಗಿ ದೃಶ್ಯ ಪತ್ತೆ, ನೈಟ್ ಮೋಡ್, ಪೋರ್ಟ್ರೇಟ್ ಆಪ್ಟಿಮೈಸೇಶನ್ ಮತ್ತು ಬ್ಯೂಟಿ ಮೋಡ್‌ ಸೇರಿದಂತೆ ಹಲವು ಎಐ ಫೀಚರ್ ಒಳಗೊಂಡಿದೆ. ಹಾಗೆಯೇ ಐಆರ್ (IR) ಬ್ಲಾಸ್ಟರ್‌ ಬೆಂಬಲ ಸಹ ಹೊಂದಿದೆ.

Best Mobiles in India

English summary
Vivo T4 5G Launching in India Today at 12PM: Check expected price, Specifications, features and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+