Home
ಸುದ್ದಿಜಾಲ

Vivo: ಟ್ರಿಪಲ್‌ ಕ್ಯಾಮೆರಾ ಇರುವ ವಿವೋದ ಈ ಫೋನ್‌ ಮೇಲೆ ಬರೋಬ್ಬರಿ 40% ರಿಯಾಯಿತಿ!

ವಿವೋದ ಫೋನ್‌ಗಳು (Vivo phone) ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಅದರಲ್ಲೂ ಬಜೆಟ್‌ ಬೆಲೆಯ ಫೋನ್‌ಗಳಿಗೆ ಸಾಕಷ್ಟು ಬೇಡಿಕೆ ಇದ್ದು, ಈ ಮೂಲಕ ಬಳಕೆದಾರರ ಅಗತ್ಯತೆಗಳನ್ನು ಪೂರೈಸುವ ಕೆಲಸ ಮಾಡುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವೆ ವಿವೋದ ಈ ಫೋನ್‌ ಭಾರೀ ಬೆಲೆ ಇಳಿಕೆಯೊಂದಿಗೆ ಕಾಣಿಸಿಕೊಂಡಿದೆ.

ಹೌದು, ಪ್ರಮುಖ ಇ-ಕಾಮರ್ಸ್‌ ಸೈಟ್‌ನಲ್ಲಿ ವಿವೋ U20 ಸ್ಮಾರ್ಟ್‌ಫೋನ್‌ಗೆ (Vivo U20 smartphone) ಭಾರೀ ಆಫರ್ ಘೋಷಣೆ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ 8 GB RAM ಆಯ್ಕೆ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದು, 16 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಆಫರ್ ಬೆಲೆ ವಿವರದ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಟ್ರಿಪಲ್‌ ಕ್ಯಾಮೆರಾ ಇರುವ ವಿವೋದ ಈ ಫೋನ್‌ ಮೇಲೆ ಬರೋಬ್ಬರಿ 40% ರಿಯಾಯಿತಿ!

ವಿವೋ U20 ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಫೋನ್ 21,990 ರೂ.ಗಳ ಸಾಮಾನ್ಯ ಬೆಲೆ ಹೊಂದಿದೆ. ಆದರೆ ನೀವು ಇದನ್ನು ಈಗ 12,990ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದು. ಯಾಕೆಂದರೆ ಈ ಫೋನ್‌ಗೆ ಫ್ಲಿಪ್ ಕಾರ್ಟ್‌(Flipkart) 40% ರಿಯಾಯಿತಿ ಘೋಷಣೆ ಮಾಡಿದೆ. ಇದರೊಂದಿಗೆ ನೀವು ಬ್ಯಾಂಕ್‌ ಕೊಡುಗೆ ಬಳಕೆ ಮಾಡಿಕೊಳ್ಳುವ ಮೂಲಕ ಇನ್ನೂ ಅಗ್ಗದ ದರದಲ್ಲಿ ಈ ಫೋನ್‌ ಖರೀದಿ ಮಾಡಬಹುದಾಗಿದೆ.

ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಇಎಂಐ ವ್ಯವಹಾರದ ಮೇಲೆ 10% ರಿಯಾಯಿತಿ, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್ ಮತ್ತು ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಬ್ಯಾಂಕ್ ಆಫರ್ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ ಆಫರ್ ಲಭ್ಯ ಇದೆ. ಜೊತೆಗೆ ಇತರೆ ಕ್ಯಾಶ್‌ಬ್ಯಾಕ್/ಕೂಪನ್ ಕೊಡುಗೆಯೂ ಲಭ್ಯ ಇದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್‌ ಬಗ್ಗೆ ತಿಳಿದುಕೊಳ್ಳಿ.

ಟ್ರಿಪಲ್‌ ಕ್ಯಾಮೆರಾ ಇರುವ ವಿವೋದ ಈ ಫೋನ್‌ ಮೇಲೆ ಬರೋಬ್ಬರಿ 40% ರಿಯಾಯಿತಿ!

ವಿವೋ U20 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.53 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ ಉತ್ತಮ ವೀಕ್ಷಣೆ ಅನುಭವ ಪಡೆಯಬಹುದಾಗಿದೆ. ಇದರೊಂದಿಗೆ 395 ppi ಸಾಂದ್ರತೆ ಹಾಗೂ ಇನ್ನಿತರೆ ಡಿಸ್‌ಪ್ಲೇ ಫೀಚರ್ಸ್‌ ಅನ್ನು ಇದು ಹೊಂದಿದೆ.

ವಿವೋ U20 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ವಿವರ: ಕ್ವಾಲ್ಕಾಮ್ SDM675 ಸ್ನಾಪ್ಡ್ರಾಗನ್ 675 (11 nm) ಪ್ರೊಸೆಸರ್‌ ಬಲ ಹೊಂದಿರುವ ಈ ಫೋನ್ ಅಡ್ರಿನೊ 612 ಗ್ರಾಫಿಕ್ಸ್‌ ಕಾರ್ಡ್‌ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 8 GB RAM ಹಾಗೂ 128 GB ಇಂಟರ್‌ ಸ್ಟೋರೇಜ್‌ ಆಯ್ಕೆ ಪಡೆದಿದ್ದು, ಯಾವುದೇ ಅಡೆ ತಡೆ ಇಲ್ಲದ ಸೇವೆ ನೀಡಲಿದೆ. ಅಷ್ಟೇ ಅಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಬಳಕೆ ಮಾಡಿಕೊಂಡು ಸ್ಟೋರೇಜ್‌ ವಿಸ್ತರಣೆ ಸಹ ಮಾಡಿಕೊಳ್ಳಬಹುದು.

ವಿವೋ U20 ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು, 16 ಮೆಗಾಪಿಕ್ಸೆಲ್‌ನ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್‌ನ ಅಲ್ಟ್ರಾವೈಡ್ ಕ್ಯಾಮೆರಾ ಹಾಗೂ 2 ಮೆಗಾಪಿಕ್ಸೆಲ್‌ನ ಮ್ಯಾಕ್ರೋ ಕ್ಯಾಮೆರಾವನ್ನು ಇದರಲ್ಲಿ ಕಾಣಬಹುದಾಗಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್‌, ಪನೋರಮಾ ಫೀಚರ್ಸ್‌ ಲಭ್ಯ ಇದೆ. ಜೊತೆಗೆ 16 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ ಹೊಂದಿದೆ.

ಟ್ರಿಪಲ್‌ ಕ್ಯಾಮೆರಾ ಇರುವ ವಿವೋದ ಈ ಫೋನ್‌ ಮೇಲೆ ಬರೋಬ್ಬರಿ 40% ರಿಯಾಯಿತಿ!

ವಿವೋ U20 ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, 18W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಇದರ ಜೊತೆಗೆ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, A2DP, LE, aptX, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಕನೆಕ್ಟಿವಿಟಿ ಸೌಲಭ್ಯ ಇದೆ.

Best Mobiles in India

English summary
Vivo U20 smartphone got huge offer in flipkart. This smartphone will perform well with the 8 GB RAM option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+