Home
ಸುದ್ದಿಜಾಲ

ಬಹುನಿರೀಕ್ಷಿತ 'ವಿವೋ U20' ಸ್ಮಾರ್ಟ್‌ಫೋನ್ ಇಂದು ಬಿಡುಗಡೆ!

ವಿವೋ ಕಂಪನಿಯು ಇತ್ತೀಚಿಗಷ್ಟೆ ದೇಶಿಯ ಮಾರುಕಟ್ಟೆಗೆ ಬಜೆಟ್‌ ಬೆಲೆಯಲ್ಲಿ 'ವಿವೋ U10' ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಗ್ರಾಹಕರನ್ನು ಸೆಳೆದಿತ್ತು. ಈಗ ಮತ್ತೆ ಅದೇ ಹಾದಿಯಲ್ಲಿ ಮುನ್ನಡೆದಿರುವ ವಿವೋ ಇಂದು 'ವಿವೋ U20' ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಲಿದೆ. ಈ ಸ್ಮಾರ್ಟ್‌ಫೋನ್ ಸಹ ಬಜೆಟ್‌ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿರುವ ಸೂಚನೆಗಳನ್ನು ಈಗಾಗಲೇ ಹೊರಹಾಕಿದೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ.

ವಿವೋ

ಹೌದು, ವಿವೋ ಸಂಸ್ಥೆಯ ಬಹುನಿರೀಕ್ಷಿತ 'ವಿವೋ U20' ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12 ಗಂಟೆಗೆ ಲಾಂಚ್ ಆಗಲಿದೆ. ಈ ಸ್ಮಾರ್ಟ್‌ಫೋನಿನಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್, 5,000mAh ಬ್ಯಾಟರಿ, ಸ್ನ್ಯಾಪ್‌ಡ್ರಾಗನ್ 675 ಪ್ರೊಸೆಸರ್‌ನಂತಹ ಫೀಚರ್ಸ್‌ಗಳನ್ನು ನಿರೀಕ್ಷಿಸಲಾಗಿದೆ. ಹಾಗಾದರೇ ವಿವೋ U20 ಸ್ಮಾರ್ಟ್‌ಫೋನ್ ಯಾವೆಲ್ಲಾ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ಡಿಸೈನ್

ಡಿಸ್‌ಪ್ಲೇ ಮತ್ತು ಡಿಸೈನ್

'ವಿವೋ U20' ಸ್ಮಾರ್ಟ್‌ಫೋನ್ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ರೆಸಲ್ಯೂಶನನ್ನು ಡಿಸ್‌ಪ್ಲೇ ಹೊಂದಿರಲಿದೆ. ಹಾಗೆಯೇ ಡಿಸ್‌ಪ್ಲೇ ಪಿಲ್ಸಲ್ ರೆಸಲ್ಯೂಶನ್‌ ಸಾಮರ್ಥ್ಯವು 1080 x 2340 ಆಗಿರಲಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ಅಡುವಿನ ಅನುಪಾತ ಶೇ.90.3% ಆಗಿರಲಿದೆ. ಈ ಡಿಸ್‌ಪ್ಲೇಯು ವಾಟರ್‌ಡ್ರಾಪ್‌ ನಾಚ್ ಮಾದರಿಯಲ್ಲಿರಲಿದ್ದು, ಡಿಸ್‌ಪ್ಲೇಯ ಪ್ರಖರತೆಯು ಉತ್ತಮವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

'ವಿವೋ U20' ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 675 ಪ್ರೊಸೆಸರ್‌ ಅನ್ನು ಹೊಂದಿರುವ ಸಾಧ್ಯತೆಗಳಿದ್ದು, ಅದಕ್ಕೆ ಪೂರಕವಾಗಿ ಅಂಡ್ರಾಯ್ಡ್‌ 9 ಪೈ ಓಎಸ್‌ ಅನ್ನು ಪಡೆದಿರುವ ನಿರೀಕ್ಷೆಗಳಿವೆ. ಇದರೊಂದಿಗೆ 6GB RAM ಮತ್ತು 64GB ಸ್ಟೋರೇಜ್‌ನ ಒಂದೇ ವೇರಿಯಂಟ್‌ ಆಯ್ಕೆಯಲ್ಲಿ ಲಾಂಚ್ ಆಗಬಹುದು. ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ 256GB ಮೆಮೊರಿ ವಿಸ್ತರಿಸುವ ಅವಕಾಶ ನೀಡಬಹುದು.

ಸ್ಪೆಷಲ್‌ ಕ್ಯಾಮೆರಾ

ಸ್ಪೆಷಲ್‌ ಕ್ಯಾಮೆರಾ

'ವಿವೋ U20' ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದ್ದು, ಮುಖ್ಯ ಕ್ಯಾಮೆರಾವು 16ಎಂಪಿ ಸೆನ್ಸಾರ್‌ ಪಡೆದಿರಲಿದೆ. ಇನ್ನು ಸೆಕೆಂಡ್ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿರಲಿದ್ದು, ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್‌ ಹೊಂದಿರಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್‌ನಲ್ಲಿರುವ ನಿರೀಕ್ಷೆಗಳಿವೆ. ಜತೆಗೆ ಅಗತ್ಯ ಎಡಿಟಿಂಗ್ ಫೀಚರ್ಸ್‌ಗಳು ಇರಲಿವೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

'ವಿವೋ U20' ಸ್ಮಾರ್ಟ್‌ಫೋನಿನಲ್ಲಿ 5,000mAh ಬ್ಯಾಟರಿ ಸಾಮರ್ಥ್ಯವನ್ನು ನೀಡುವ ಸಾಧ್ಯತೆಗಳು ಅಧಿಕವಾಗಿದೆ. ಹಾಗೆಯೇ ಇದಕ್ಕೆ ಬೆಂಬಲವಾಗಿ 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಬಹುದಾಗಿದೆ. ವೈಫೈ, ಫಿಂಗರ್‌ಪ್ರಿಂಟ್ ಸೆನ್ಸಾರ್, ಜಿಪಿಎಸ್, ಕಂಪಾಸ್ ಆಯ್ಕೆಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಇರಲಿವೆ.

Best Mobiles in India

English summary
The Vivo U20 is another mid-budget smartphone in the U series after the Vivo U10. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+