ಬಜೆಟ್‌ ಬೆಲೆಯಲ್ಲಿ 'ವಿವೋ U3' ಸ್ಮಾರ್ಟ್‌ಫೋನ್‌ ಲಾಂಚ್!

|

ವಿವೋ ಕಂಪನಿಯು ಇತ್ತೀಚಿಗೆ ಅಗ್ಗದ 'ವಿವೋ U10' ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಅದರ ಬೆನ್ನಲೇ ಈಗ U ಸರಣಿಯಲ್ಲಿ 'ವಿವೋ U3' ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 675 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, 5,000mAh ಬಿಗ್ ಬ್ಯಾಟರಿ ಫೀಚರ್‌ ಒಳಗೊಂಡಿದೆ. ಹಾಗೆಯೇ ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದ್ದು, ಬಜೆಟ್‌ ಬೆಲೆಯನ್ನು ಹೊಂದಿದೆ.

ವಿವೋ U3

ಹೌದು, ವಿವೋ ಸಂಸ್ಥೆಯು 'ವಿವೋ U3' ಸ್ಮಾರ್ಟ್‌ಫೋನ್‌ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಮೂರು ಬ್ಲ್ಯಾಕ್, ಬ್ಲೂ ಮತ್ತು ಗ್ರೀನ್ ಬಣ್ಣಗಳ ಆಯ್ಕೆಗಳನ್ನು ಹೊಂದಿರುವ ಜೊತೆಗೆ 4GB RAM + 64GB ಮತ್ತು 6GB RAM + 64GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ 'ವಿವೋ U3' ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಮತ್ತು ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ವಿವೋ U3 ಸ್ಮಾರ್ಟ್‌ಫೋನ್ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿದ್ದು, ಡಿಸ್‌ಪ್ಲೇಯು 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದ್ದು, ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 394ppi ಆಗಿದೆ. ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.90.3% ಅನುಪಾತದಲ್ಲಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ವಿವೋ U3 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 675 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದರೊಂದಿಗೆ ಫನ್‌ಟಚ್ OS 9 ಹಾಗೂ ಆಂಡ್ರಾಯ್ಡ್‌ 9 ಪೈ ಓಎಸ್‌ ಬೆಂಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್‌ ಆಯ್ಕೆಗಳಲ್ಲಿದ್ದು, ಅವುಗಳು 4GB RAM + 64GB ಸ್ಟೋರೇಜ್ ಮತ್ತು 6GB RAM + 64GB ಸ್ಟೋರೇಜ್ ಆಗಿವೆ.

ಮೂರು ಕ್ಯಾಮೆರಾ

ಮೂರು ಕ್ಯಾಮೆರಾ

ವಿವೋ U3 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಆಯ್ಕೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು f/1.78 ಅಪರ್ಚರ್ನೊಂದಿಗೆ 16ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು f/2.2 ಅಪರ್ಚರ್ನೊಂದಿಗೆ 8ಎಂಪಿ ಸೆನ್ಸಾರ್‌ನಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 2ಎಂಪಿಯ ಡೆಪ್ತ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೂ ಸೆಲ್ಫಿ ಕ್ಯಾಮೆರಾವು f/2.0 ಅಪರ್ಚರ್ನೊಂದಿಗೆ 16ಎಂಪಿ ಸೆನ್ಸಾರ್‌ನಲ್ಲಿದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ವಿವೋ U3 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರೊಂದಿಗೆ 18W ಸಾಮರ್ಥ್ಯದ ಡ್ಯುಯಲ್ ಇಂಜಿನ್ ಫ್ಲ್ಯಾಶ್ ಚಾರ್ಜ ಸೌಲಭ್ಯವನ್ನು ನೀಡಿದೆ. ಜೊತೆಗೆ ಮೈಕ್ರೋ-ಯುಎಸ್‌ಬಿ ಪೋರ್ಟ್‌, ಯುಎಸ್‌ಬಿ ಟೈಪ್‌-ಸಿ ಪೋರ್ಟ್‌, ವೈಫೈ, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್ ಸೇರಿದಂತೆ ಇತ್ತೀಚಿನ ಹಲವು ಅಗತ್ಯ ಫೀಚರ್ಸ್‌ಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ U3 ಸ್ಮಾರ್ಟ್‌ಫೋನ್ ಚೀನಾದಲ್ಲಿ ಬಿಡುಗಡೆ ಆಗಿದ್ದು, ಎರಡು ವೇರಿಯಂಟ್‌ ಮಾದರಿಗಳನ್ನು ಹೊಂದಿದೆ. 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆಯು CNY 999 (ಅಂದಾಜು. 10,020ರೂ), ಮತ್ತು 6GB RAM + 64GB CNY 1,199 (ಅಂದಾಜು. 12,030ರೂ) ಪ್ರೈಸ್‌ಟ್ಯಾಗ್‌ನಲ್ಲಿ ಗುರುತಿಸಿಕೊಂಡಿವೆ. ಭಾರತಕ್ಕೆ ಈ ಫೋನ್ ಯಾವಾಗ ಎಂಟ್ರಿ ಕೊಡಲಿದೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ.

Best Mobiles in India

English summary
Vivo U3 runs Android 9 Pie with FunTouch OS 9 custom skin on top. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X