Home
ಸುದ್ದಿಜಾಲ

ವಿವೋ ಕಂಪೆನಿಯ ವಿ19 ಸ್ಮಾರ್ಟ್‌ಫೋನ್‌ ಬಿಡುಗಡೆ!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವಾರು ಕಂಪೆನಿಗಳ ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಆದರೂ ಗ್ರಾಹಕರು ಮಾತ್ರ ತಮ್ಮ ನೆಚ್ಚಿನ ಬ್ರ್ಯಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿ ಮಾಡುತ್ತಾರೆ. ಇವುಗಳಲ್ಲಿ ಚೀನಾ ಮೂಲದ ವಿವೋ ಸಂಸ್ಥೆ ಕೂಡ ಒಂದಾಗಿದ್ದು, ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸೋ ಮೂಲಕ ಪ್ರಸಿದ್ಧಿಯನ್ನ ಪಡೆದುಕೊಂಡಿದೆ. ಇತ್ತೀಚಿಗಷ್ಟೇ ವಿವೋ ವಿ15 ಪ್ರೊ ಮತ್ತು ವಿವೋ ವಿ17 ಪ್ರೊ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದ್ದ ಸಂಸ್ಥೆ ಇದೀಗ ಅದರ ಮುಂದುವರೆದ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಹೌದು

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿ ವಿವೋ ತನ್ನ ಹೊಸ ಅವೃತ್ತಿಯ ವಿವೋ ವಿ19 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು ವಿವೋ ವಿ17 ಸ್ಮಾರ್ಟ್‌ಫೋನ್‌ನ ಮುಂದುವರೆದ ಆವೃತ್ತಿಯಾಗಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ 48 ಮೆಗಾಪಿಕ್ಸೆಲ್‌ ಪ್ರೈಮರಿ ಕ್ಯಾಮೆರಾ ಒಳಗೊಂಡ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಸ್ನಾಪ್‌ಡ್ರಾಗನ್‌ 675 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿ

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಇದು 1080 x 2400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.44ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ ಪಿಕ್ಸೆಲ್‌ ಸಾಂದ್ರತೆ 409PPI ಆಗಿದ್ದು, ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 91.38% ರಷ್ಟಿದೆ. ಜೊತೆಗೆ ಇದು ಇನ್‌ಡಿಸ್‌ಪ್ಲೇ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗಳಿಗಾಗಿ ಉತ್ತಮ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 675 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಫನ್‌ಟಚ್ OS 9.2 ಬೆಂಬಲಿತ ಆಂಡ್ರಾಯ್ಡ್ ಓಎಸ್‌ ಫೈ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಂತರಿಕ ಶೇಖರಣಾ ಸಾಮರ್ಥ್ಯವನ್ನ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಶೇಖರಣಾ ಸಾಮರ್ಥ್ಯವನ್ನ 128GB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ ವಿ19 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ವೈಡ್‌ ಆಂಗಲ್‌, ಅಲ್ಟ್ರಾ ವೈಡ್‌ ಆಂಗಲ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 32ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ಅನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿಟಿವಿಟಿ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್‌ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, GPS, ಯುಎಸ್‌ಬಿ ಟೈಪ್‌-ಸಿ ಪೋರ್ಟ್‌, 4G VOLTE ಅನ್ನು ಬೆಂಬಲಿಸಲಿದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಆಕ್ಸಿಲೆರೋ ಮೀಟರ್‌ ಸೆನ್ಸಾರ್‌, ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಸದ್ಯ ಇಂಡೋನೇಷಿಯಾದ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಇದರ ಬೆಲೆ IDR 4,299,000 (ಅಂದಾಜು 22,150. ರೂ,) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮಾರ್ಚ್ 26 ರಿಂದ ಮಾರುಕಟ್ಟೆಯಲ್ಲಿ ಖರೀದಿಸಲು ಲಭ್ಯವಿದ್ದು, ಗ್ಲೇಸಿಯರ್‌ ಐಸ್‌, ಮಿಡ್‌ನೈಟ್‌ ಓಶಿಯನ್‌ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
The key highlights of the Vivo V19 are a 48-megapixel quad-camera setup, Snapdragon 675, and 4,500mAh battery.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+