Home
ಸುದ್ದಿಜಾಲ

ವಿವೋ V19 ನಿಯೋ ಫೋನ್‌ ಲಾಂಚ್!..ಕ್ವಾಡ್‌ ಕ್ಯಾಮೆರಾ ವಿಶೇಷ!

ಮೊಬೈಲ್ ಮಾರುಕಟ್ಟೆಯಲ್ಲಿ ಭಿನ್ನ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್ ಪರಿಚಯಿಸಿ ಗುರುತಿಸಿಕೊಂಡಿರುವ ವಿವೋ ಇತ್ತೀಚಿಗಷ್ಟೆ ವಿವೋ ವಿ19 ಸ್ಮಾರ್ಟ್‌ಫೋನ್ ಲಾಂಚ್ ಮಾಡಿತ್ತು. ಇದೀಗ ಈ ಸರಣಿಯ ಅಪ್‌ಡೇಟ್ ಆವೃತ್ತಿಯಾಗಿ ವಿವೋ V19 ನಿಯೋ ಹೆಸರಿನ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ ಮೀಡ್‌ ರೇಂಜ್ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಸ್ಮಾರ್ಟ್‌ಫೋನ್‌

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಈಗ ಹೊಸದಾಗಿ ವಿವೋ V19 ನಿಯೋ ಸ್ಮಾರ್ಟ್‌ಫೋನ್‌ ಅನ್ನು ಫಿಲಿಪೈನ್ಸ್ ನಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 675 ಚಿಪ್‌ಸೆಟ್‌ ಪ್ರೊಸೆಸರ್ ಅನ್ನು ಪಡೆದಿದೆ. ಹಾಗೆಯೇ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಜೊತೆಗೆ 18W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಬ್ಲೂ ಮತ್ತು ವೈಟ್‌ ಬಣ್ಣಗಳ ಆಯ್ಕೆ ಸಹ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ವಿವೊ V19 ನಿಯೋ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.44 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಡಿಸ್‌ಪ್ಲೇ ಆಗಿದ್ದು, ಆರನೇ ತಲೆಮಾರಿನ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಅಲ್ಲದೆ ಇದು ಸೂಪರ್ ಅಮೋಲೆಡ್ ಪಂಚ್ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ.

ಕ್ವಾಡ್‌ ಕ್ಯಾಮೆರಾ

ಕ್ವಾಡ್‌ ಕ್ಯಾಮೆರಾ

ವಿವೊ V19 ನಿಯೋ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 32 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೊ V19 ನಿಯೋ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಜೊತೆಗೆ 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ, GPS, OTG, 2.4GHz ಮತ್ತು 5GHz ಡ್ಯುಯಲ್-ಬ್ಯಾಂಡ್ ವೈ-ಫೈ ಸೌಲಭ್ಯ ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೊ V19 ನಿಯೋ ಸ್ಮಾರ್ಟ್‌ಫೋನ್‌ ವೇರಿಯಂಟ್ ಫಿಲಿಫೈನ್ಸ್ ನಲ್ಲಿ ಲಾಂಚ್ ಮಾಡಿದೆ. ಭಾರತದಲ್ಲಿ ಯಾವಾಗ ಲಾಂಚ್ ಆಗಲಿದೆ ಎಂಬ ಬಗ್ಗೆ ಕಂಪನಿಯು ಮಾಹಿತಿ ನೀಡಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆಯು PHP 17,999(ಭಾರತದಲ್ಲಿ 27,200ರೂ. ಆಗಿರಲಿದೆ ಎಂದು ಅಂದಾಜಿಸಬಹುದಾಗಿದೆ )

Best Mobiles in India

English summary
Vivo V19 Neo has been unveiled in the Philippines, and is currently available for purchasing.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+