ವಿವೋ ಸಂಸ್ಥೆಯಿಂದ ವಿವೋ V19 ನಿಯೋ ಸ್ಮಾರ್ಟ್‌ಫೋನ್ ಬಿಡುಗಡೆ!
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ವಿಶೇಷ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ತನ್ನದೇ ಆದ ಪ್ರಾಬಲ್ಯವನ್ನ ವಿಸ್ತರಿಸಿಕೊಂಡಿದೆ. ಸದ್ಯ ತನ್ನ ಕ್ಯಾಮೆರಾ ಫೀಚರ್ಸ್‌ಗಳಿಂದಲೇ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿರುವ ವಿವೋ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ವಿವೊ ಕಂಪೆನಿ ತನ್ನ ಹೊಸ ವಿವೋ V19 ನಿಯೋ ಸ್ಮಾರ್ಟ್‌ಫೋನ್ ಅನ್ನು ಫಿಲಿಪೈನ್ಸ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಅಲ್ಲದೆ ಸಿಂಗಲ್ ಪಂಚ್ ಹೋಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ವಿವೋ V19 ನಿಯೋ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 44-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವೀಡಿಯೋ ವೀಕ್ಷಣೆ ಹಾಗೂ ವೀಡಿಯೋ ಕರೆಗಳಿಗೆ ಯೋಗ್ಯವಾದ ಮಾದರಿಯ ಡಿಸ್‌ಪ್ಲೇಯನ್ನ ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 675 SoC ಪ್ರೊಸೆಸರ್ ವೇಗವನ್ನ ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಅನ್ನು ಫಂಟೌಚ್ ಓಎಸ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ.

ಕ್ಯಾಮೆರಾ ವಿನ್ಯಾಸ
ವಿವೋ V19 ನಿಯೋ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, 4 ಜಿ ಎಲ್ ಟಿಇ, ಬ್ಲೂಟೂತ್ ವಿ 5.0, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಪ್ಲಾಸ್ಟಿಕ್ ಬಾಡಿ ಸಹ ಇದೆ.

ಬೆಲೆ ಮತ್ತು ಲಭ್ಯತೆ
ವಿವೊ V19 ನಿಯೋ ಸ್ಮಾರ್ಟ್‌ಫೋನ್ ಬೆಲೆ PHP 17,999 (ಸುಮಾರು 27,200 ರೂ.) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಡ್ಮಿರಲ್ ಬ್ಲೂ ಮತ್ತು ಕ್ರಿಸ್ಟಲ್ ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications




