ಹೊಸ ವಿವೋ V19 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

|

ವಿವೋ ಮೊಬೈಲ್ ಸಂಸ್ಥೆಯು ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಹಾಗೆಯೇ V ಸರಣಿಯಲ್ಲಿಯೂ ಆಕರ್ಷಕ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಲಾಂಚ್ ಮಾಡಿ ಸೈ ಅನಿಸಿಕೊಂಡಿದೆ. ಸಂಸ್ಥೆಯು V ಸರಣಿಯಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ವಿವೋ V19 ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಈ ಫೋನ್ ಬೆಲೆಯಲ್ಲಿ ಈಗ ಭಾರೀ ಬೆಲೆ ಇಳಿಕೆ ಆಗಿದ್ದು, ಗ್ರಾಹಕರು ತಿರುಗಿ ನೋಡುವಂತಾಗಿದೆ.

ವಿವೋ V19

ಹೌದು, ವಿವೋ V19 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 4000ರೂ.ವರೆಗೂ ಇಳಿಕೆ ಆಗಿದೆ. ಬೆಲೆ ಕಡಿತವು ವಿವೋ V19 ಸ್ಮಾರ್ಟ್‌ಫೋನ್‌ನ ಎಲ್ಲ ವೇರಿಯಂಟ್‌ಗಳ ಮೇಲೂ ಅನ್ವಯ ಆಗಲಿದೆ. ಇನ್ನು ವಿವೋ V19 8GB + 128GB ವೇರಿಯಂಟ್‌ನ ಬೆಲೆಯು 27,990ರೂ. ಆಗಿತ್ತು. ಆದರೆ ಪ್ರಸ್ತುತ ಬೆಲೆ ಇಳಿಕೆಯಿಂದಾಗಿ 24,990ರೂ. ಪ್ರೈಸ್‌ಟ್ಯಾಗ್‌ನಲ್ಲಿ ಗುರುತಿಸಿಕೊಂಡಿದೆ. ಹಾಗೆಯೇ 8GB RAM + 256GB ಸ್ಟೋರೇಜ್‌ನ ಟಾಪ್‌ಎಂಡ್ ವೇರಿಯಂಟ್‌ 27,990ರೂ. ಪ್ರೈಸ್‌ಟ್ಯಾಗ್ ಪಡೆದಿದೆ. ಇನ್ನು ವಿವೋ V19 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ವಿವೊ V19 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.44 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಡಿಸ್‌ಪ್ಲೇ ಆಗಿದ್ದು, ಆರನೇ ತಲೆಮಾರಿನ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಅಲ್ಲದೆ ಇದು ಸೂಪರ್ ಅಮೋಲೆಡ್ ಪಂಚ್ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ವಿವೊ V19 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 712 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ 8GB RAM ಹೊಂದಿದ್ದು, ಆಂತರೀಕ ಸ್ಟೋರೇಜ್‌ಗಾಗಿ 128GB ಮತ್ತು 256GB ಆಯ್ಕೆಗಳನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ V19 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫ್ಲ್ಯಾಶ್‌ಚಾರ್ಜ್ 2.0 ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ, GPS, OTG, 2.4GHz ಮತ್ತು 5GHz ಡ್ಯುಯಲ್-ಬ್ಯಾಂಡ್ ವೈ-ಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಇ-ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ V19 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಕಡಿತವಾಗಿದೆ. ಸದ್ಯ 8GB RAM + 128GB ಶೇಖರಣಾ ಆಯ್ಕೆಯು 24,990ರೂ.ಬೆಲೆಯನ್ನು ಹೊಂದಿದೆ. ಮತ್ತು 8GB RAM + 256GB ಶೇಖರಣಾ ಆಯ್ಕೆಯು 27,990 ರೂ. ಬೆಲೆಯನ್ನ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಿಯಾನೋ ಬ್ಲ್ಯಾಕ್ ಮತ್ತು ಮಿಸ್ಟಿಕ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯತೆ ಪಡೆದಿವೆ.

Best Mobiles in India

English summary
Vivo V19 has received a price cut upto rs.4000 in India across all variants.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X