ವಿವೋ V19 ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಗೆ ಎಂಟ್ರಿ!

|

ಟೆಕ್‌ ಮಾರುಕಟ್ಟೆಯಲ್ಲಿ ವಿಭಿನ್ನ ಸ್ಮಾರ್ಟ್‌ಫೋನ್‌ಗಳಿಗೆ ವಿವೋ ಕಂಪೆನಿಯು ಹೆಸರುವಾಸಿಯಾಗಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದಲೇ ಸೈ ಎನಿಸಿಕೊಂಡಿರುವ ವಿವೋ ಇದೀಗ ವಿವೋ V19 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರತದ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ್ದ ವಿವೋ ಮತ್ತೊಮ್ಮೆ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಸೆಟಪ್ ಹೊಂದಿದ್ದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸೌಂಡ್‌ ಮಾಡುವ ಲಕ್ಷಣ ಕಾಣ್ತಿದೆ.

ಹೌದು

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ತನ್ನ ವಿವೋ V19 ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 712 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಹಾಗೇ ನೋಡೋದಾದ್ರೆ ಈ ಸ್ಮಾರ್ಟ್‌ಫೋನ್‌ ಅನ್ನು ಕಳೆದ ತಿಂಗಳು ಜಾಗತಿಕವಾಗಿ ಪರಿಚಯಿಸಲಾಗಿತ್ತು. ಸದ್ಯ ಇದೀಗ ಹಲವಾರು ವಿಳಂಬದ ನಂತರ ಅದನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. ಆದರೆ ಕಂಪನಿಯು COVID-19 ಪ್ರಯುಕ್ತ ರಾಷ್ಟ್ರವ್ಯಾಪಿ ಲಾಕ್‌ಡೌನ್ ಇದ್ದ ಕಾರಣ ಬಿಡುಗಡೆ ಮಾಡುವುದು ವಿಳಂಬವಾಗಿತ್ತು ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಲೇಖನದಲ್ಲಿ ತಿಳಿಸಿಕೊಡ್ತೀವಿ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೊ V19 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.44 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಡಿಸ್‌ಪ್ಲೇ ಆಗಿದ್ದು, ಆರನೇ ತಲೆಮಾರಿನ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಅಲ್ಲದೆ ಇದು ಸೂಪರ್ ಅಮೋಲೆಡ್ ಪಂಚ್ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ V19 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಫೋನ್‌ನ ಮೇಲಿನ ಎಡ ಮೂಲೆಯಲ್ಲಿ ಎಲ್-ಆಕಾರದ ರೀತಿಯ ಮಾಡ್ಯೂಲ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ರಿಯರ್‌ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಮೋಡ್, ಅಲ್ಟ್ರಾ-ಸ್ಟೇಬಲ್ ವಿಡಿಯೋ, ಆರ್ಟ್ ಪೋರ್ಟ್ರೇಟ್ ವಿಡಿಯೋ, ಸೂಪರ್ ಮ್ಯಾಕ್ರೋ ಅನ್ನು ನೀಡಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಸೆಲ್ಫಿ, ಸೂಪರ್ ವೈಡ್-ಆಂಗಲ್ ಸೆಲ್ಫಿ, ಅಲ್ಟ್ರಾ-ಸ್ಟೇಬಲ್ ವಿಡಿಯೋ ಗಳನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫ್ಲ್ಯಾಶ್‌ಚಾರ್ಜ್ 2.0 ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ, GPS, OTG, 2.4GHz ಮತ್ತು 5GHz ಡ್ಯುಯಲ್-ಬ್ಯಾಂಡ್ ವೈ-ಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಇ-ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ V19 ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಶೇಖರಣಾ ಆಯ್ಕೆಗೆ 27,990 ರೂ. ಮತ್ತು 8GB RAM + 256GB ಶೇಖರಣಾ ಆಯ್ಕೆಗೆ 31,990 ರೂ. ಬೆಲೆಯನ್ನ ನಿಗಧಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಿಯಾನೋ ಬ್ಲ್ಯಾಕ್ ಮತ್ತು ಮಿಸ್ಟಿಕ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಇದು ಕಂಪನಿಯ ಸ್ವಂತ ಇ-ಸ್ಟೋರ್, ಅಮೆಜಾನ್, ಫ್ಲಿಪ್‌ಕಾರ್ಟ್, ಇತರ ಇ-ಕಾಮರ್ಸ್ ವೆಬ್‌ಸೈಟ್‌ಗಳು ಮತ್ತು ಪಾಲುದಾರ ಆಫ್‌ಲೈನ್ ಮಳಿಗೆಗಳ ಮೂಲಕ ಮೇ 15 ರಿಂದ ಮಾರಾಟಕ್ಕೆ ಬರಲಿದೆ. ಇದಲ್ಲದೆ ಪ್ರಾರಂಭಿಕ ಹಂತದಲ್ಲಿ ಎಚ್‌ಡಿಎಫ್‌ಸಿ ಮತ್ತು ಐಸಿಐಸಿಐ ಕ್ರೆಡಿಟ್ ಕಾರ್ಡ್‌ಗಳೊಂದಿಗೆ 10% ಕ್ಯಾಶ್‌ಬ್ಯಾಕ್ ಸಿಗಲಿದೆ. ಅಲ್ಲದೆ ಒನ್-ಟೈಮ್ ಸ್ಕ್ರೀನ್ ರಿಪ್ಲೇಸ್ಮೆಂಟ್ ಆಫರ್, 12 ತಿಂಗಳವರೆಗೆ ನೋ ಕಾಸ್ಟ್‌ ಇಎಂಐ ಆಯ್ಕೆಗಳು, ವಿವೋ ಏರ್‌ಟೆಲ್ ಡಬಲ್ ಡೇಟಾ, ಉಚಿತ ಏರ್‌ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂ ಚಂದಾದಾರಿಕೆ, ಅನ್ನು ಪ್ರತಿ ಖರೀದಿಯೊಂದಿಗೆ ನೀಡುತ್ತಿದೆ. ಈ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಲಭ್ಯವಿರುತ್ತವೆ.

Best Mobiles in India

English summary
Vivo V19 has launched in India as the latest smartphone offering from the company. The phone's key features include a dual selfie camera setup and Snapdragon 712 SoC.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X