ವಿವೋ V20 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ!
ವಿವೋ ಮೊಬೈಲ್ ಸಂಸ್ಥೆಯು ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಹಾಗೆಯೇ V ಸರಣಿಯಲ್ಲಿಯೂ ಆಕರ್ಷಕ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಲಾಂಚ್ ಮಾಡಿ ಸೈ ಅನಿಸಿಕೊಂಡಿದೆ. ಸಂಸ್ಥೆಯು V ಸರಣಿಯಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ ವಿವೋ V20 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಈ ಫೋನ್ ಬೆಲೆಯಲ್ಲಿ ಈಗ ಭಾರೀ ಬೆಲೆ ಇಳಿಕೆ ಆಗಿದ್ದು, ಗ್ರಾಹಕರು ತಿರುಗಿ ನೋಡುವಂತಾಗಿದೆ.

ಹೌದು, ವಿವೋ V20 ಸ್ಮಾರ್ಟ್‌ಫೋನ್ ಬೆಲೆಯಲ್ಲಿ 2,000ರೂ.ವರೆಗೂ ಇಳಿಕೆ ಆಗಿದೆ. ಬೆಲೆ ಕಡಿತವು ವಿವೋ V20 ಸ್ಮಾರ್ಟ್‌ಫೋನ್‌ನ ಎಲ್ಲ ವೇರಿಯಂಟ್‌ಗಳ ಮೇಲೂ ಅನ್ವಯ ಆಗಲಿದೆ. ಇನ್ನು ಬೆಲೆ ಇಳಿಕೆ ನಂತರ ವಿವೋ V20 ಫೋನಿನ 8GB + 128GB ಬೇಸ್ ವೇರಿಯಂಟ್‌ನ ಬೆಲೆಯು 22,990ರೂ. ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್‌ನ ಟಾಪ್‌ಎಂಡ್ ವೇರಿಯಂಟ್ 25,490ರೂ. ಪ್ರೈಸ್‌ಟ್ಯಾಗ್ ಪಡೆದಿದೆ. ಇನ್ನು ಈ ಬೆಲೆ ಇಳಿಕೆಯ ಕೊಡುಗೆಯು ಇ-ಕಾಮರ್ಸ್ ದೈತ್ಯಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ತಾಣಗಳಲ್ಲಿ ಲಭ್ಯ. ಹಾಗಾದರೇ ವಿವೋ V20 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ
ವಿವೋ V20 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದೆ. ಇದು 6.44-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತದೊಂದಿಗೆ ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯವೇನು
ವಿವೋ V20 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11 ರೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆಯನ್ನು ಸಹ ನೀಡಿದೆ.

ಟ್ರಿಪಲ್ ಕ್ಯಾಮೆರಾ ವಿಶೇಷತೆ
ವಿವೋ V20 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 44 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಡ್ಯುಯಲ್-ವ್ಯೂ ವಿಡಿಯೋ, ಸ್ಲೊ-ಮೊ ಸೆಲ್ಫಿ ವಿಡಿಯೋ, ಮತ್ತು ಮಲ್ಟಿ-ಸ್ಟೈಲ್ ಪೋರ್ಟ್ರೇಟ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ V20 ಸ್ಮಾರ್ಟ್‌ಫೋನ್ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು,ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ,ಹಾಟ್‌ಸ್ಪಾಟ್ ಅನ್ನು ಬೆಂಬಲಿಸಲಿದೆ.


Click it and Unblock the Notifications