Just In
Don't Miss
- Sports
ಆಸಿಸ್ ವಿರುದ್ಧದ ಭಾರತದ ಗೆಲುವಿಗೆ ದ್ರಾವಿಡ್ ಕೊಡುಗೆ ಅಪಾರ: ಇನ್ಜಮಾಮ್ ಉಲ್ ಹಕ್
- News
ಕೊವ್ಯಾಕ್ಸಿನ್ ಬೇಡ, ಕೊವಿಶೀಲ್ಡ್ ಕೊಡಿ ಎನ್ನುತ್ತಿರುವ ವೈದ್ಯಕೀಯ ಸಿಬ್ಬಂದಿ!?
- Automobiles
2021ರ ಅವಧಿಯಲ್ಲಿ ಒಟ್ಟು 25 ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು ಇಂಡಿಯಾ
- Movies
ಸಲಾರ್ ಚಿತ್ರಕ್ಕೆ ಎಂಟ್ರಿ ಕೊಟ್ಟ ಸ್ಟಾರ್ ನಟ: ವಿಲನ್ ಪಾತ್ರದಲ್ಲಿ ಖ್ಯಾತ ಹೀರೋ?
- Finance
ಭಾರತದಲ್ಲಿ ಮತ್ತೊಂದು ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್; ಎಷ್ಟು ದರ?
- Lifestyle
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸದ್ಯದಲ್ಲೇ ವಿವೋ V20 ಪ್ರೊ ಫೋನ್ ಲಾಂಚ್! ಡ್ಯುಯೆಲ್ ಸೆಲ್ಫಿ ಕ್ಯಾಮೆರಾ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಳಿಗೆ ಸೈ ಎನಿಸಿಕೊಂಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಹೈ ಎಂಡ್ ಬೆಲೆಯಿಂದ ಹಿಡಿದು ಬಜೆಟ್ ಪ್ರೈಸ್‌ಟ್ಯಾಗ್ ಸ್ಮಾರ್ಟ್‌ಫೋನ್‌ಗಳನ್ನು ಸಹ ಪರಿಚಯಿಸಿದೆ. ಇನ್ನು ಕಳೆದ ತಿಂಗಳು ವಿವೋ V20 ಸ್ಮಾರ್ಟ್‌ಫೋನ್ ಪರಿಚಯಿಸಿದ್ದ ವಿವೋ ಇದೀಗ ವಿವೋ V20 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ 30,000 ರೂ ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ.

ಹೌದು, ವಿವೋ ಸಂಸ್ಥೆ ತನ್ನ ಹೊಸ ವಿವೋ V20 ಪ್ರೊ 5G ಸ್ಮಾರ್ಟ್‌ಫೋನ್ ಅನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಅಲ್ಲದೆ ಈಗಾಗಲೇ ಈ ಸ್ಮಾರ್ಟ್‌ಫೋನ್ ಫ್ರೀ ಬುಕಿಂಗ್‌ಗೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫೀಚರ್ಸ್, ವಿಶೇಷತೆ ಏನು ಅನ್ನೊದು ಆನ್‌ಲೈನ್‌ನಲ್ಲಿ ಸೋರಿಕೆ ಆಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ವಿವೋ V20 ಪ್ರೊ 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು 409ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತ ಮತ್ತು 84.98% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 11 ಆಧಾರಿತ ಫಂಟೌಚ್ ಓಎಸ್ 11 ಅನ್ನು ಚಾಲನೆ ಮಾಡುತ್ತದೆ ಎಂದು ಹೇಳಲಾಗಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ
ವಿವೋ V20 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿರಲಿದೆ. ಜೊತೆಗೆ 44 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಡ್ಯುಯೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್ ದಿ ಫೋಕಸ್ ಫೀಚರ್ಸ್ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು,33W ಫ್ಲ್ಯಾಶ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಜಿಪಿಎಸ್, ವೋಲ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ವಿವೋ V20 ಪ್ರೊ 5G ಸ್ಮಾರ್ಟ್‌ಫೋನ್ ಬೆಲೆ ಭಾರತದಲ್ಲಿ 30,000 ರೂ. ಒಳಗೆ ಲಭ್ಯವಾಗಲಿದೆ. ಇನ್ನು ಫ್ರೀ ಬುಕ್ಕಿಂಗ್ ಮಾಡುವ ಗ್ರಾಹಕರು ಐಸಿಐಸಿಐ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ, ಶೇ 10 ರಷ್ಟು ಕ್ಯಾಶ್‌ಬ್ಯಾಕ್, ಸುಲಭ ಇಎಂಐ ಆಯ್ಕೆಗಳು ಮತ್ತು ಜಿಯೋ ಪ್ರಯೋಜನಗಳನ್ನು ಪಡೆಯುತ್ತಾರೆ. ಸದ್ಯ ಈ ಸ್ಮಾರ್ಟ್‌ಫೊನ್ ಬಿಡುಗಡೆಯ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190