ವಿವೋ V20 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಾಂಕ ನಿಗದಿ!

|

ಜನಪ್ರಿಯ ವಿವೋ ಮೊಬೈಲ್‌ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ವಿವೋ V20 ಸ್ಮಾರ್ಟ್‌ಫೋನ್ ಸರಣಿಯು ಗ್ರಾಹಕರನ್ನು ಸೆಳೆದಿದೆ. ಆ ಪೈಕಿ ವಿವೋ V20 ಪ್ರೊ ಸ್ಮಾರ್ಟ್‌ಫೋನ್ ಇದೇ ಡಿಸೆಂಬರ್ 2ರಂದು ಭಾರತದಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಜೊತೆಗೆ 8GB RAM ಮತ್ತು 128GB ಆಂತರಿಕ ಸ್ಟೋರೇಜ್‌ ಮಾಡೆಲ್‌ ಹೊಂದಿರಲಿದೆ ಎಂದು ಹೇಳಲಾಗುತ್ತಿದೆ.

ವಿವೋ

ಹೌದು, ವಿವೋ ಸಂಸ್ಥೆ ಹೊಸ ವಿವೋ V20 ಪ್ರೊ ಸ್ಮಾರ್ಟ್‌ಫೋನ್‌ ಇದೇ ಡಿಸೆಂಬರ್ 2ರಂದು ಅನಾವರಣ ಮಾಡುವ ನಿರೀಕ್ಷೆಗಳು ಹೆಚ್ಚಾಗಿವೆ. ಆದರೆ ಈ ಬಗ್ಗೆ ಕಂಪನಿಯು ಇನ್ನು ಅಧಿಕೃತ ದಿನಾಂಕ ಬಹಿರಂಗ ಪಡಿಸಿಲ್ಲ. ಈ ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದ್ದು, ಅದಕ್ಕೆ ಪೂರಕವಾಗಿ 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಹೊಂದಿರುವ ಸಾಧ್ಯತೆಗಳು ಇವೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ ಪಡೆದಿರಲಿದೆ ಎನ್ನುವ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ವಿವೋ V20 ಪ್ರೊ 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು 409ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತ ಮತ್ತು 84.98% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ವಿವೋ V20 ಪ್ರೊ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 11 ಆಧಾರಿತ ಫಂಟೌಚ್ ಓಎಸ್ 11 ಅನ್ನು ಚಾಲನೆ ಮಾಡುತ್ತದೆ ಎಂದು ಹೇಳಲಾಗಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ವಿವೋ V20 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಕ್ಯಾಮೆರಾವನ್ನು ಹೊಂದಿರಲಿದೆ. ಜೊತೆಗೆ 44 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್‌ ದಿ ಫೋಕಸ್ ಫೀಚರ್ಸ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ V20 ಪ್ರೊ ಸ್ಮಾರ್ಟ್‌ಫೋನ್‌ 4000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫ್ಲ್ಯಾಶ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಜಿಪಿಎಸ್, ವೋಲ್ಟ್ ಅನ್ನು ಬೆಂಬಲಿಸಲಿದೆ.

Best Mobiles in India

English summary
A new report now suggests that Vivo V20 Pro will launch in India on December 2.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X