Home
ಸುದ್ದಿಜಾಲ

ವಿವೋ V20 SE ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ವಿವೋ ಮೊಬೈಲ್ ಕಂಪೆನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ವಿವೋ V20 SE ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ ಆಗಿದ್ದು, ಮತ್ತೆ ಗ್ರಾಹಕರು ತಿರುಗಿ ನೋಡುವಂತಾಗಿದೆ. ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿರುವುದು ವಿವೋ V20 SE ಫೋನಿನ ಪ್ರಮುಖ ಹೈಲೈಟ್‌ ಆಗಿದೆ.

ಪ್ರೈಸ್‌ಟ್ಯಾಗ್‌

ಹೌದು, ವಿವೋ ಸಂಸ್ಥೆಯು ವಿವೋ V20 ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 1,000ರೂ.ಗಳ ಕಡಿತವಾಗಿದೆ. 20,999ರೂ. ಪ್ರೈಸ್‌ಟ್ಯಾಗ್‌ ಹೊಂದಿದ್ದ ಈ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆಯಿಂದಾಗಿದೆ 19,990ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್‌ ಹೊಂದಿದೆ. ಹಾಗಾದರೇ ವಿವೋ V20 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ವಿವೋ V20 SE ಸ್ಮಾರ್ಟ್‌ಫೋನ್‌ 6.44-ಇಂಚಿನ ಪೂರ್ಣ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 1,080x2,400 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ. ಹಾಗೆಯೇ ಡಿಸ್‌ಪ್ಲೇಯ ಅನುಪಾತ 20:9 ಆಗಿದೆ. ಹೈ ಪಿಕ್ಸಲ್ ರೆಸಲ್ಯೂಶನ್ ಸ್ಕ್ರೀನ್ ಇದ್ದು, ವಿಡಿಯೊ ವೀಕ್ಷಣಗೆ ಉತ್ತಮವಾಗಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ವಿವೊ V20 SE ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ನಿಂದ ನಿಯಂತ್ರಿಸಲ್ಪಡುತ್ತದೆ. ಇನ್ನು ಈ ಫೋನ್ 8GB RAM ಮತ್ತು 128GB ಸ್ಟೋರೇಜ್ ಆಯ್ಕೆ ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಹೆಚ್ಚಿಸುವ ಅವಕಾಶ ಇದೆ. ಅಧಿಕ RAM ಫೋನಿನ ಕಾರ್ಯಕ್ಕೆ ಬಲ ತುಂಬಲಿದೆ. ಹೆಚ್ಚಿನ ಡೇಟಾ ಬೇಡುವ ಗೇಮ್‌ಗಳ ಆಟಕ್ಕೂ ಸಫೋರ್ಟ್‌ ನೀಡಲಿದೆ.

ಟ್ರಿಪಲ್ ಕ್ಯಾಮೆರಾ ರಚನೆ

ಟ್ರಿಪಲ್ ಕ್ಯಾಮೆರಾ ರಚನೆ

ವಿವೋ V20 SE ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿ ಇರಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾ 8ಎಂಪಿ ಮತ್ತು ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್‌ನಲ್ಲಿರಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳು

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳು

ವಿವೋ V20 SE ಫೋನ್ 4,100mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ, GPS, OTG, 2.4GHz ಮತ್ತು 5GHz ಡ್ಯುಯಲ್-ಬ್ಯಾಂಡ್ ವೈ-ಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಇ-ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೊ V20 SE ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಮಾಡೆಲ್‌ ಅನ್ನು ಹೊಂದಿದ್ದು, ಈಗ ಬೆಲೆ ಇಳಿಕೆ ಕಂಡು 19,990ರೂ.ಪ್ರೈಸ್‌ಟ್ಯಾಗ್‌ ಅನ್ನು ಪಡೆದಿದೆ. ಈ ಫೋನ್ ಗ್ರೀನ್ ಹಾಗೂ ಬ್ಲ್ಯಾಕ್‌ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

Best Mobiles in India

English summary
Vivo V20 SE has 128GB of onboard storage as standard, along with microSD card support for expansion.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+