ಭಾರತದಲ್ಲಿ ವಿವೋ V20 SE ಸ್ಮಾರ್ಟ್‌ಫೋನ್ ಲಾಂಚ್!..ಬೆಲೆ ಎಷ್ಟು?
ಜನಪ್ರಿಯ ವಿವೋ ಮೊಬೈಲ್ ಕಂಪೆನಿ ಈಗಾಗಲೇ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗುರುತಿಸಿಕೊಂಡಿದೆ. ಇತ್ತೀಚಿಗಷ್ಟೆ ಸಂಸ್ಥೆಯು V20 ಸರಣಿಯಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿದೆ. ಅವುಗಳಲ್ಲಿ ಭಾರತದಲ್ಲಿ ಈಗ V20 SE ಸ್ಮಾರ್ಟ್‌ಫೋನ್ ಮಾಡೆಲ್ ಅನ್ನು ಬಿಡುಗಡೆ ಮಾಡಿದ್ದು, ಈ ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ.

ಹೌದು, ವಿವೋ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ಈಗ ವಿವೋ V20 SE ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಹೊಂದಿದ್ದು, ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದೆ. ಹಾಗೆಯೇ 4,100mAh ಬ್ಯಾಕ್‌ಅಪ್ ಜೊತೆಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ. ಇನ್ನುಳಿದಂತೆ ವಿವೋ V20 SE ಸ್ಮಾರ್ಟ್‌ಫೋನ್ ಬೆಲೆ ಎಷ್ಟು? ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವಿವೋ V20 SE ಡಿಸ್‌ಪ್ಲೇ
ವಿವೊ V20 SE ಸ್ಮಾರ್ಟ್‌ಫೋನ್ 6.44-ಇಂಚಿನ ಪೂರ್ಣ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಡಿಸ್‌ಪ್ಲೇಯು 1,080x2,400 ಪಿಕ್ಸೆಲ್ ರೆಸಲ್ಯೂಶನ್ ಹೊಂದಿರಲಿದೆ. ಹಾಗೆಯೇ ಡಿಸ್‌ಪ್ಲೇಯ ಅನುಪಾತ 20:9 ಆಗಿರಲಿದೆ.

ವಿವೋ V20 SE ಪ್ರೊಸೆಸರ್
ವಿವೊ V20 SE ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ನಿಂದ ನಿಯಂತ್ರಿಸಲ್ಪಡುತ್ತದೆ. ಇನ್ನು ಈ ಫೋನ್ 8GB RAM ಮತ್ತು 128GB ಸ್ಟೋರೇಜ್ ಆಯ್ಕೆ ಪಡೆದಿರಲಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸುವ ಅವಕಾಶ ಇರಲಿದೆ.

ವಿವೋ V20 SE ಕ್ಯಾಮೆರಾ
ವಿವೋ V20 SE ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿ ಇರಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾ 8ಎಂಪಿ ಮತ್ತು ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್‌ನಲ್ಲಿರಲಿದೆ.

ವಿವೋ V20 SE ಬ್ಯಾಟರಿ
ವಿವೋ V20 SE ಸ್ಮಾರ್ಟ್‌ಫೋನ್ 4100mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರಲಿದೆ. ಇದರೊಂದಿಗೆ 33W ಸಾಮರ್ಥ್ಯದ ಫ್ಲ್ಯಾಶ್‌ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬೆಲೆ ಎಷ್ಟು ಮತ್ತು ಲಭ್ಯತೆ?
ವಿವೊ V20 SE ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಮಾಡೆಲ್ ಅನ್ನು ಹೊಂದಿದ್ದು, 20,990 ರೂ ಪ್ರೈಸ್‌ಟ್ಯಾಗ್ ಅನ್ನು ಪಡೆದಿದೆ. ಇದೇ ನವೆಂಬರ್ 3 ರಂದು ಪ್ರಮುಖ ಇ-ಕಾಮರ್ಸ್ ತಾಣಗಳು ಹಾಗೂ ವಿವೋ ಆನ್‌ಲೈನ್ ಸ್ಟೋರ್‌ಗಳ ಮೂಲಕ ಸೇಲ್ ಶುರು ಮಾಡಲಿದೆ. ಈ ಫೋನ್ ಗ್ರೀನ್ ಹಾಗೂ ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ.


Click it and Unblock the Notifications




