Home
ಸುದ್ದಿಜಾಲ

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ವಿವೋ V20 ಸ್ಮಾರ್ಟ್‌ಫೋನ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ತನ್ನ ವಿ ಸರಣಿಯಲ್ಲಿ ಹೊಸ V20 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಹೊಸ ವಿವೋ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದು ವಾಟರ್ ಡ್ರಾಪ್ ಶೈಲಿಯ ಡಿಸ್‌ಪ್ಲೇ ನಾಚ್ ಅನ್ನು ಹೊಂದಿದೆ. ಅಲ್ಲದೆ ವಿವೊ V20 ಭಾರತದಲ್ಲಿ ಆಂಡ್ರಾಯ್ಡ್ 11 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುವ ಮೊದಲ ಫೋನ್ ಆಗಿದೆ. ಹಾಗೇಯೇ ಇದು 33W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.

V20 ಸ್ಮಾರ್ಟ್‌ಫೋನ್

ಹೌದು, ವಿವೋ ಕಂಪೆನಿ ತನ್ನ ಹೊಸ V20 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದರ ಬೇಸ್‌ ಮಾಡೆಲ್ 8GB+128GB ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆಯನ್ನು ಸಹ ನೀಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ವಿವೋ V20 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದು 6.44-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತದೊಂದಿಗೆ ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್‌ 720G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11 ರೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆಯನ್ನು ಸಹ ನೀಡಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ವಿವೋ V20 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 44 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಡ್ಯುಯಲ್-ವ್ಯೂ ವಿಡಿಯೋ, ಸ್ಲೊ-ಮೊ ಸೆಲ್ಫಿ ವಿಡಿಯೋ, ಮತ್ತು ಮಲ್ಟಿ-ಸ್ಟೈಲ್ ಪೋರ್ಟ್ರೇಟ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು,ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ,ಹಾಟ್‌ಸ್ಪಾಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ V20 ಬೇಸ್‌ ಮಾಡೆಲ್‌ ಬೆಲೆ 8GB RAM ಮತ್ತು 128GB ರೂಪಾಂತರಕ್ಕೆ 24,990 ರೂ ಆಗಿದ್ದು, 256GB ಸ್ಟೋರೇಜ್ ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ 27,990 ರೂ.ಆಗಿದೆ. ಇದು ಮಿಡ್ನೈಟ್ ಜಾಜ್‌, ಮೂನ್ಲೈಟ್ ಸೋನಾಟಾ ಮತ್ತು ಸನ್ಸೆಟ್ ಮೆಲೊಡಿ ಎಂಬ ಮೂರು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಇನ್ನು ವಿವೋ ವಿ 20 ಇಂದಿನಿಂದ ದೇಶದಲ್ಲಿ ಪ್ರಿ-ಬುಕಿಂಗ್ ಆಗಲಿದ್ದು, ಇದರ ಮಾರಾಟ ಅಕ್ಟೋಬರ್ 20 ರಿಂದ ಪ್ರಾರಂಭವಾಗಲಿದೆ. ಈ ಫೋನ್ ಆನ್‌ಲೈನ್‌ನಲ್ಲಿ ಫ್ಲಿಪ್‌ಕಾರ್ಟ್ ಮತ್ತು ದೇಶದ ವಿವೋ ಆನ್‌ಲೈನ್ ಸ್ಟೋರ್ ಮೂಲಕ ಲಭ್ಯವಾಗಲಿದೆ. ಇದಲ್ಲದೆ, ಇದು ವಿವೋ ಎಕ್ಸ್‌ಕ್ಲೂಸಿವ್ ಸ್ಟೋರ್‌ಗಳ ಜೊತೆಗೆ ಕ್ರೋಮಾ, ರಿಲಯನ್ಸ್ ಡಿಜಿಟಲ್, ವಿಜಯ್ ಸೇಲ್ಸ್, ಪೂರ್ವಿಕ, ಸಂಗೀತ, ಬಿಗ್ ಸಿ, ಮತ್ತು ಲಾಟ್ ಸೇರಿದಂತೆ ವಿವಿಧ ಆಫ್‌ಲೈನ್ ಚಿಲ್ಲರೆ ಚಾನೆಲ್‌ಗಳ ಮೂಲಕ ಮಾರಾಟವಾಗಲಿದೆ.

Best Mobiles in India

English summary
Vivo V20 price in India starts at Rs. 24,990 for the 8GB + 128GB storage variant.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+