ಭಾರತದಲ್ಲಿ ವಿವೋ V20 ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ!

|

ಮೊಬೈಲ್ ತಯಾರಿಕಾ ಸಂಸ್ಥೆ ವಿವೋ ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಮಾಡಿರುವ ವಿವೋ V20 ಸ್ಮಾರ್ಟ್‌ಫೋನ್ ಈಗ ಭಾರತೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್‌ 720G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಈ ಸ್ಮಾರ್ಟ್‌ಫೋನ್ 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದಿದೆ. ಹಾಗೆಯೇ ಟ್ರಿಪಲ್ ಕ್ಯಾಮೆರಾ ರಚನೆಯಿಂದ ಗಮನ ಸೆಳೆದಿದೆ.

ವಿವೋ

ಹೌದು, ವಿವೋ ಕಂಪೆನಿಯ ಹೊಸ ವಿವೋ V20 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಇ-ಕಾಮರ್ಸ್‌ ತಾಣ ಹಾಗೂ ಅಧಿಕೃತ ವಿವೋ ಆನ್‌ಲೈನ್‌ ಸ್ಟೋರ್‌ನಲ್ಲಿ ಖರೀದಿಗೆ ಲಭ್ಯವಿದೆ. ಇದರೊಂದಿಗೆ ಈ ಫೋನ್ ರಿಲಾಯನ್ಸ್ ಡಿಜಿಟಲ್, ಪೂರ್ವಿಕಾ, ಸಂಗೀತಾ, ಹಾಗೂ ಕ್ರೋಮ್ ಆಫ್‌ಲೈನ್‌ ಸ್ಟೋರ್‌ಗಳಲ್ಲಿಯೂ ಲಭ್ಯವಿದೆ. ಇನ್ನು 8GB + 128GB ಸ್ಟೋರೇಜ್ ಸಾಮರ್ಥ್ಯದ ಬೇಸ್‌ ವೇರಿಯಂಟ್‌ ಬೆಲೆಯು 24,990ರೂ.ಗಳಾಗಿದೆ. ಹಾಗೆಯೇ 8GB + 256GB ಸ್ಟೋರೇಜ್‌ ವೇರಿಯಂಟ್‌ 27,990ರೂ.ಗಳ ಪ್ರೈಸ್‌ಟ್ಯಾಗ್‌ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ವಿವೋ V20 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದು 6.44-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20: 9 ರಚನೆಯ ಅನುಪಾತದೊಂದಿಗೆ ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ವಿವೋ V20 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್‌ 720G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11 ರೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆಯನ್ನು ಸಹ ನೀಡಿದೆ.

ಟ್ರಿಪಲ್ ಕ್ಯಾಮೆರಾ ವಿಶೇಷತೆ

ಟ್ರಿಪಲ್ ಕ್ಯಾಮೆರಾ ವಿಶೇಷತೆ

ವಿವೋ V20 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 44 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಡ್ಯುಯಲ್-ವ್ಯೂ ವಿಡಿಯೋ, ಸ್ಲೊ-ಮೊ ಸೆಲ್ಫಿ ವಿಡಿಯೋ, ಮತ್ತು ಮಲ್ಟಿ-ಸ್ಟೈಲ್ ಪೋರ್ಟ್ರೇಟ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ V20 ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು,ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ,ಹಾಟ್‌ಸ್ಪಾಟ್‌ ಅನ್ನು ಬೆಂಬಲಿಸಲಿದೆ.

Best Mobiles in India

Read more about:
English summary
Vivo V20 is now available for purchase in India. Key features of the phone include a 44-megapixel autofocus selfie camera.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X