ವಿವೋದ ಈ ಹಳೆಯ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!..ನೀವು ಖರೀದಿಸ್ತೀರಾ?
ಇ ಕಾಮರ್ಸ್ ದೊಡ್ಡಣ್ಣ ಎನಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಗ್ರಾಹಕರನ್ನು ಆಕರ್ಷಿಸಲು ಡಿಸ್ಕೌಂಟ್ ಘೋಷಿಸುತ್ತದೆ. ಅದರಲ್ಲಿಯೂ ಮೊಬೈಲ್ ಫೋನ್‌ಗಳಿಗೆ ಏನಾದರೀ ವಿಶೇಷ ರಿಯಾಯಿತಿ ನೀಡಿತ್ತದೆ. ಸದ್ಯ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ವಿವೋ ಸಂಸ್ಥೆಯ ವಿವೋ V21 5G ಸ್ಮಾರ್ಟ್‌ಫೋನ್ ಭಾರೀ ರಿಯಾಯಿತಿ ಪ್ರೈಸ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ವಿವೋ V21 5G ಸ್ಮಾರ್ಟ್‌ಫೋನ್ ಶೇ. 25% ರಷ್ಟು ನೇರ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಫೋನಿನ 8 GB RAM + 256 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 24,490ರೂ. ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಫ್ಲಿಪ್‌ಕಾರ್ಟ್ ತಾಣದಲ್ಲಿ ಲಭ್ಯ ಇರುವ ಇತರೆ ಕೊಡುಗೆಗಳನ್ನು ಪಡೆದುಕೊಂಡರೆ, ಮತ್ತಷ್ಟು ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.

ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್ ಸೌಲಭ್ಯ ಪಡೆದಿದೆ. ಹಾಗೆಯೇ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಇದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಆಗಿದೆ. ಇನ್ನು ಸೆಲ್ಫಿ ಕ್ಯಾಮೆರಾವು 44 ಮೆಗಾ ಪಿಕ್ಸಲ್ ಆಗಿರುವುದು ಹೈಲೈಟ್ ಆಗಿದೆ. ಇನ್ನುಳಿದಂತೆ ವಿವೋ V21 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವಿವೋ V21 5G - ಫೀಚರ್ಸ್
ವಿವೋ ಸಂಸ್ಥೆಯ ಈ 5G ಸ್ಮಾರ್ಟ್‌ಫೋನ್ 1,080 x 2,404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 6.44 ಇಂಚಿನ ಫುಲ್ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಈ ಫೋನಿನ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಪಡೆದಿದ್ದು, ಹಾಗೆಯೇ ಇದರ ಸ್ಕ್ರೀನ್ 90 Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.
ವಿವೋ V21 5G ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U SoC ಚಿಪ್‌ಸೆಟ್ ಪ್ರೊಸೆಸರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ ಓಎಸ್ 11.1 ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್ ಅನ್ನು ಪಡೆದಿದ್ದು, ಜೊತೆಗೆ 3GB ವರೆಗೆ ವರ್ಚುವಲ್ RAM ಆಗಿ ಆಯ್ಕೆಯನ್ನು ಪಡೆದುಕೊಂಡಿದೆ.
ಈ ಸ್ಟೈಲಿಶ್ ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಶೂಟರ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಪಡೆದಿದೆ. ಇದಲ್ಲದೆ 44 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸಹ ನೀಡಲಾಗಿದ್ದು, ಈ ಸೆಲ್ಫಿ ಕ್ಯಾಮೆರಾ ಡ್ಯುಯಲ್ ಎಲ್ಇಡಿ ಸೆಲ್ಫಿ ಫ್ಲ್ಯಾಷ್ ಅನ್ನು ಪಡೆದಿದೆ.
ವಿವೋ V21 5G ಮೊಬೈಲ್ 4,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 33W ಫ್ಲ್ಯಾಶ್‌ಚಾರ್ಜ್ ಫಾಸ್ಟ್ ಚಾರ್ಜಿಂಗ್ನ ಸಪೋರ್ಟ್ ಕೂಡಾ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.1, ಜಿಪಿಎಸ್ / ಎ-ಜಿಪಿಎಸ್ ಹಾಗೂ ಯುಎಸ್‌ಬಿ ಟೈಪ್-ಸಿ ಪೋರ್ಟ್ ನಂತಹ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಬ್ಲ್ಯಾಕ್ ಹಾಗೂ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








