ಭಾರತದಲ್ಲಿ ವಿವೋ V21 5G ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ವಿವೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ವಿವೋ V21 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಪರಿಚಯಿಸಲು ಸಿದ್ಧತೆ ನಡೆಸಿದೆ. ಇದೀಗ ವಿವೋ ವಿ 21 5 ಜಿ ಲ್ಯಾಂಡಿಂಗ್ ಪೇಜ್ ಫ್ಲಿಪ್‌ಕಾರ್ಟ್‌ನಲ್ಲಿ ಲೈವ್ ಆಗಿದ್ದು, ಭಾರತದಲ್ಲಿ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿದೆ.

ಹೌದು, ವಿವೋ ಸಂಸ್ಥೆ ಹೊಸ V21 5G ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕವನ್ನು ಫಿಕ್ಸ್ ಮಾಡಿದೆ. ಸದ್ಯ ಕಂಪೆನಿಯು ಇದೇ ಏಪ್ರಿಲ್ 29 ರಂದು V21 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಪ್ಲ್ಯಾನ್ ರೂಪಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್ಕಾರ್ಟ್ ಮೂಲಕ ಫೋನ್ ಭಾರತದಲ್ಲಿ ಲಭ್ಯವಾಗಲಿದೆ ಎಂಬುದು ಸ್ಪಷ್ಟವಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ವಿವೋ V21 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, ಹೆಚ್‌ಡಿಆರ್ 10 + ಮತ್ತು 90 Hz ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್
ವಿವೋ V21 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 800U MT6853V ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿಶೇಷ
ವಿವೋ V21 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 44 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ವಿವೋ V21 5G ಸ್ಮಾರ್ಟ್‌ಫೋನ್ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 30,000 ರೂ ಒಳಗೆ ಲಭ್ಯವಾಗುವ ಸಾಧ್ಯತೆ ಇದೆ. ಇದು ಸನ್ಸೆಟ್ ಡ್ಯಾಜ್ಲ್, ಡಸ್ಕ್ ಬ್ಲೂ ಮತ್ತು ಆರ್ಕ್ಟಿಕ್ ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಇದೇ ಏಪ್ರಿಲ್ 29 ಭಾರತದಲ್ಲಿ ಬಿಡುಗಡೆ ಆಗಲಿದೆ.


Click it and Unblock the Notifications
