Home
ಸುದ್ದಿಜಾಲ

ಭಾರತದಲ್ಲಿ ವಿವೋ V21 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಜನಪ್ರಿಯ ವಿವೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ವಿವೋ V21 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹಾಗೂ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಹೊಂದಿರುವ 44 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ವಿವೋ

ಹೌದು, ವಿವೋ ಕಂಪೆನಿ ಹೊಸ ವಿವೋ V21 5G ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 29,990 ರೂ. ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ವಿವೋ V21 5G ಸ್ಮಾರ್ಟ್‌ಫೋನ್‌ 1,080x2,404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44-ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90 Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಅಲ್ಲದೆ ವರ್ಧಿತ ಬಹುಕಾರ್ಯಕ ಅನುಭವಕ್ಕಾಗಿ ಹಾರ್ಡ್‌ವೇರ್‌ 3GB ವರೆಗೆ ROM ಅನ್ನು ವರ್ಚುವಲ್ RAM ಆಗಿ ಬಳಸಲು ಅನುಮತಿಸಲು ವಿಸ್ತೃತ RAM ವೈಶಿಷ್ಟ್ಯವನ್ನು ಸಹ ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದು ಎಲ್ಇಡಿ ಫ್ಲ್ಯಾಷ್ ಮಾಡ್ಯೂಲ್ ಮತ್ತು ಒಐಎಸ್ ಬೆಂಬಲವನ್ನು ಹೊಂದಿದೆ. ಇದಲ್ಲದೆ 44 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಸೆಲ್ಫಿ ಕ್ಯಾಮೆರಾ ಡ್ಯುಯಲ್ ಎಲ್ಇಡಿ ಸೆಲ್ಫಿ ಫ್ಲ್ಯಾಷ್‌ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ V21 5G ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.1, ಜಿಪಿಎಸ್ / ಎ-ಜಿಪಿಎಸ್, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ V21 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 29,990 ರೂ. ಮತ್ತು 8GB RAM + 256GB ಸ್ಟೋರೇಜ್ ಮಾದರಿಯ ಬೆಲೆ 32,990 ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರ್ಕ್ಟಿಕ್ ವೈಟ್, ಡಸ್ಕ್ ಬ್ಲೂ ಮತ್ತು ಸನ್ಸೆಟ್ ಡ್ಯಾಝಲ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಇದೇ ಮೇ 6 ರಿಂದ ಫ್ಲಿಪ್‌ಕಾರ್ಟ್ ಮತ್ತು ವಿವೋ ಇಂಡಿಯಾ ಆನ್‌ಲೈನ್ ಮೂಲಕ ಸೇಲ್‌ ಆಗಲಿದೆ. ಇನ್ನು ಲಾಂಚ್ ಆಫರ್‌ಗಳಲ್ಲಿ ಹೆಚ್‌ಡಿಎಫ್‌ಸಿ ಬ್ಯಾಂಕ್ ಮೂಲಕ 2,000 ತ್ವರಿತ ಕ್ಯಾಶ್‌ಬ್ಯಾಕ್, 3,000 ಮೌಲ್ಯದ ಹೆಚ್ಚುವರಿ ವಿನಿಮಯ ರಿಯಾಯಿತಿ, 12 ತಿಂಗಳವರೆಗೆ ನೋ ಕಾಸ್ಟ್‌ ಇಎಂಐ ಆಯ್ಕೆಗಳು ದೊರೆಯಲಿದೆ.

Best Mobiles in India

English summary
Vivo V21 5G price in India starts at Rs. 29,990 for the 8GB RAM + 128GB storage configuration.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+