Home
ಸುದ್ದಿಜಾಲ

ವಿವೋ V21e ಸ್ಮಾರ್ಟ್‌ಫೋನ್‌ ಸರಣಿ ಬಿಡುಗಡೆ! ವಿಶೇಷತೆ ಏನು?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ವಿವೋ ಕಂಪೆನಿ ತನ್ನ ಬಹು ನಿರೀಕ್ಷಿತ ವಿವೋ V21 ಸ್ಮಾರ್ಟ್‌ಫೋನ್‌ ಸರಣಿಯನ್ನು ಲಾಂಚ್‌ ಮಾಡಿದೆ. ಈ ಸರಣಿಯಲ್ಲಿ ವಿವೋ v21 5G, ವಿವೊ v21, ಮತ್ತು ವಿವೊ v21e ಸ್ಮಾರ್ಟ್‌ಫೋನ್‌ಗಳು ಸೇರಿವೆ. ಇನ್ನು ವಿವೋ v21 5G ಮತ್ತು ವಿವೋ v21 ಸ್ಮಾರ್ಟ್‌ಫೋನ್‌ಗಳು 5G ಬೆಂಬಲವನ್ನು ಹೊರತು ಪಡಿಸಿ, ಹೆಚ್ಚು ಕಡಿಮೆ ಒಂದೇ ಮಾದರಿಯ ಫೀಚರ್ಸ್‌ಗಳನ್ನು ಹೊಂದಿದೆ. ಆದರೆ ವಿವೋ v21e ಸ್ಮಾರ್ಟ್‌ಫೋನ್‌ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ವಿವೋ

ಹೌದು, ವಿವೋ ಕಂಪೆನಿ ತನ್ನ ವಿವೋ v21 ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿದೆ. ವಿವೋ v21 5ಜಿ ಮತ್ತು ವಿವೊ v21 ಎರಡೂ ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿವೆ. ಆದರೆ v21e ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 720G SoC ಪ್ರೊಸೆಸರ್‌ ಒಳಗೊಂಡಿದೆ. ಹಾಗಾದ್ರೆ ವಿವೋ v21e ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ವಿವೊ v21e ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44-ಇಂಚಿನ ಫುಲ್‌-ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 83.5% ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು 409 ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫಂಟೌಚ್ ಓಎಸ್ 11.1 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ 44 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೊ v21e ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.1, GPS/ A-GPS, FM ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿರುತ್ತದೆ. ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ v21e ಸ್ಮಾರ್ಟ್‌ಫೋನ್‌ ಬೆಲೆ MYR 1,299 (ಸರಿಸುಮಾರು ರೂ. 23,600) ರೂ ಆಗಿದೆ. ಇದು ಡೈಮಂಡ್ ಫ್ಲೇರ್ ಮತ್ತು ರೋಮನ್ ಕಪ್ಪು ಬಣ್ಣಗಳಲ್ಲಿ ಲಭ್ಯವಿರುತ್ತದೆ. ಇನ್ನು ವಿವೋ ವಿ 21 5G ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್ 29 ರಂದು ಭಾರತಕ್ಕೆ ಬರಲಿದೆ.

Best Mobiles in India

English summary
Vivo V21e With Triple Rear Camera Launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+